ಶ್ರೀನಗರ, ಜಮ್ಮು ಕಾಶ್ಮೀರ :ಉಗ್ರರ ವಿರುದ್ಧ ಜಮ್ಮು- ಕಾಶ್ಮೀರದ ಅವಂತಿಪೋರಾದ ಚಾರ್ಸೂ ಪ್ರದೇಶದಲ್ಲಿ ಎನ್ಕೌಂಟರ್ ಪ್ರಾರಂಭವಾಗಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಜಮ್ಮು-ಕಾಶ್ಮೀರದ ಪೊಲೀಸ್ನ ವಿಶೇಷ ವಕ್ತಾರರು ಟ್ವೀಟ್ ಮಾಡಿದ್ದಾರೆ.
ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಮಂಗಳವಾರ ಬೆಳಗ್ಗೆ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಎನ್ಕೌಂಟರ್ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.