ಸೊಪೊರಾ(ಜಮ್ಮು ಕಾಶ್ಮೀರ):ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೊಪೊರಾ ಪಾನಿಪೋರಾ ಅರಣ್ಯದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವಿನ ಘರ್ಷಣೆಯಲ್ಲಿ ಎಲ್‌ಇಟಿ ಉಗ್ರನನ್ನು ಹತ್ಯೆ ಮಾಡಲಾಗಿದೆ. ಇನ್ನೂ ಮೂವರು ಉಗ್ರರು ತಪ್ಪಿಸಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಉಗ್ರರು ಮತ್ತು ಭದ್ರತಾ ಸಿಬ್ಬಂದಿ ಮಧ್ಯೆ ಸಂಜೆ ವೇಳೆ ಗುಂಡಿನ ಚಕಮಕಿ ಆರಂಭವಾಗಿತ್ತು. ಸೊಪೊರಾದ ಪನಿಪೋರಾ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿದ್ದ ಮಾಹಿತಿಯ ಮೇರೆಗೆ ಜಂಟಿ ಕಾರ್ಯಾಚರಣೆಗೆ ಇಳಿದ ಪೊಲೀಸ್ ಹಾಗೂ ಸೇನಾ ಪಡೆಗಳು ಉಗ್ರರನ್ನು ಬೇಟೆಯಾಡಲು ಕಾರ್ಯಾಚರಣೆ ಆರಂಭಿಸಿದ್ದರು. ಇದರಲ್ಲಿ ಓರ್ವ ಎಲ್‌ಇಟಿ ವಿದೇಶಿ ಉಗ್ರನನ್ನು ಗುಂಡಿಕ್ಕಿ ಬೇಟೆಯಾಡಿದ್ದಾರೆ. ಇನ್ನೂ ಮೂವರು ಪರಾರಿಯಾಗಿದ್ದು, ಅವರ ಪತ್ತೆಗೆ ಕಾರ್ಯಾಚರಣೆ ಮುಂದುವರಿದಿದೆ.