ಶ್ರೀನಗರ(ಜಮ್ಮು ಕಾಶ್ಮೀರ):ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಸಿರ್ಹಾಮಾ ಪ್ರದೇಶದಲ್ಲಿ ಮತ್ತು ಕುಲ್ಗಾಂನಲ್ಲಿ ಶನಿವಾರ ಬೆಳ್ಳಂಬೆಳಗ್ಗೆ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ಮುಂದುವರೆದಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ. ಅನಂತನಾಗ್ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್ ಲಷ್ಕರ್ ಎ ತೋಯ್ಬಾ ಉಗ್ರಗಾಮಿ ಸಂಘಟನೆಯ ಕಮಾಂಡರ್ ಹತ್ಯೆಗೀಡಾಗಿದ್ದಾನೆ ಎಂದು ತಿಳಿದುಬಂದಿದೆ.
ಅನಂತನಾಗ್ ಎನ್‌ಕೌಂಟರ್‌ನಲ್ಲಿ ಸಾವನ್ನಪ್ಪಿದ ಉಗ್ರನನ್ನು ಎಲ್‌ಇಟಿಗೆ ಸೇರಿದ ನಿಸಾರ್ ದಾರ್ ಗುರ್ತಿಸಲಾಗಿದೆ. ಉಗ್ರರ ಉಪಸ್ಥಿತಿಯ ಬಗ್ಗೆ ವಿಶ್ವಾಸಾರ್ಹ ಮಾಹಿತಿಯ ಆಧಾರದ ಮೇಲೆ ಜಮ್ಮು ಕಾಶ್ಮೀರ್ ಪೊಲೀಸ್, ರಾಷ್ಟ್ರೀಯ ರೈಫಲ್ಸ್ ಮತ್ತು ಸಿಆರ್ಪಿಎಫ್ನ ಜಂಟಿ ತಂಡವು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದರು. ಭದ್ರತಾ ಪಡೆಗಳು ಶಂಕಿತರು ಇರುವ ಸ್ಥಳವನ್ನು ಸಮೀಪಿಸಿದ ತಕ್ಷಣ, ಉಗ್ರರು ಅವರ ಮೇಲೆ ಗುಂಡು ಹಾರಿಸಿದ್ದಾರೆ. ಅನಂತನಾಗ್ ಎನ್‌ಕೌಂಟರ್‌ನಲ್ಲಿ ಸಾವನ್ನಪ್ಪಿದ ಉಗ್ರನನ್ನು ಎಲ್‌ಇಟಿಗೆ ಸೇರಿದ ನಿಸಾರ್ ದಾರ್ ಗುರ್ತಿಸಲಾಗಿದೆ.