ಕರ್ನಾಟಕ

karnataka

ETV Bharat / bharat

ಉಗ್ರರು - ಭದ್ರತಾ ಪಡೆಗಳ ನಡುವೆ ಗುಂಡಿನ ಕಾಳಗ; ಇಬ್ಬರು ಉಗ್ರರು ಹತ - ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಎನ್​ಕೌಂಟರ್

ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೊಪೋರ್‌ನ ನಾಥಿಪೊರಾ ಪ್ರದೇಶದಲ್ಲಿ ಮಂಗಳವಾರ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಕಾಳಗ ನಡೆದಿದೆ. ಮೂಲಗಳ ಪ್ರಕಾರ, ವಿದೇಶಿ ಭಯೋತ್ಪಾದಕ ಸೇರಿದಂತೆ ಇಬ್ಬರು ಉಗ್ರರು ಸಿಕ್ಕಿಬಿದ್ದಿದ್ದಾರೆ ಎನ್ನಲಾಗಿದೆ.

encounter
encounter

By

Published : May 4, 2021, 8:05 PM IST

Updated : May 4, 2021, 8:52 PM IST

ಸೊಪೋರ್‌(ಜಮ್ಮು ಮತ್ತು ಕಾಶ್ಮೀರ):ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೊಪೋರ್‌ನ ನಾಥಿಪೊರಾ ಪ್ರದೇಶದಲ್ಲಿ ಮಂಗಳವಾರ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಎನ್​ಕೌಂಟರ್ ನಡೆದಿದೆ.

ನಾಥಿಪೊರಾ ಪ್ರದೇಶದಲ್ಲಿ ಉಗ್ರರು ಅಡಗಿಕೊಂಡಿದ್ದಾರೆ ಎಂಬ ಮಾಹಿತಿ ಬಂದ ನಂತರ, ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಪ್ರಾರಂಭಿಸಿದ್ದರು. ಈ ಸಮಯದಲ್ಲಿ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದ್ದು, ನಂತರ ಇಬ್ಬರ ನಡುವೆ ಗುಂಡಿನ ಕಾಳಗ ಆರಂಭವಾಗಿದೆ. ಇಬ್ಬರು ಉಗ್ರರು ನಾಥಿಪೊರಾದ ಮನೆಯೊಂದರಲ್ಲಿ ಸಿಕ್ಕಿಬಿದ್ದಿದ್ದಾರೆ ಎನ್ನಲಾಗಿದೆ.

ಪೊಲೀಸರ ಮತ್ತು ಸೇನೆ ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದು, 22 ಆರ್‌ಆರ್ ಮತ್ತು ಸಿಆರ್‌ಪಿಎಫ್ ಯೋಧರು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ತಿಳಿದು ಬಂದಿದೆ.

Last Updated : May 4, 2021, 8:52 PM IST

ABOUT THE AUTHOR

...view details