ಶ್ರೀನಗರ(ಜಮ್ಮು ಮತ್ತು ಕಾಶ್ಮೀರ):ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಚಂದಗಾಮ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಎನ್ಕೌಂಟರ್ನಲ್ಲಿ ಮೂವರು ಉಗ್ರರು ಹತನಾಗಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.
ಈ ಪ್ರದೇಶದಲ್ಲಿ ಎರಡರಿಂದ ಮೂವರು ಉಗ್ರರು ಅಡಗಿ ಕುಳಿತಿದ್ದಾರೆ ಎನ್ನಲಾಗಿತ್ತು. ಉಗ್ರರು ಇರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ಮತ್ತು ಭದ್ರತಾ ಪಡೆಗಳ ಜಂಟಿ ತಂಡ ಆ ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯಾಚರಣೆ ಆರಂಭಿಸಿದರು. ಬಳಿಕ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ.
24 ಗಂಟೆಗಳಲ್ಲಿ ದಕ್ಷಿಣ ಕಾಶ್ಮೀರದಲ್ಲಿ ನಡೆದ ಎರಡನೇ ಎನ್ಕೌಂಟರ್ ಇದಾಗಿದೆ. 2022ರ ಮೊದಲ ಐದು ದಿನಗಳಲ್ಲಿ ಐದನೆಯದು. ಈ ಎಲ್ಲ ಎನ್ಕೌಂಟರ್ಗಳಲ್ಲಿ ಇಂದು ಹತರಾದ 3 ಜನ ಉಗ್ರರು ಸೇರಿದಂತೆ ಎಂಟು ಮಂದಿ ಉಗ್ರರನ್ನು ಕೊಲ್ಲಲಾಗಿದೆ.