ಶ್ರೀನಗರ( ಜಮ್ಮುಕಾಶ್ಮೀರ) : ಕಣಿವೆ ರಾಜ್ಯದಲ್ಲಿ ಉಗ್ರರ ಅಟ್ಟಹಾಸ ಮಿತಿಮೀರಿದೆ. ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಕಾಶು ಚಿತ್ರಗಂನಲ್ಲಿ ಸೇನೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಭಾರತೀಯ ಯೋಧರು ಓರ್ವ ಉಗ್ರನನ್ನು ಹೊಡೆದುರುಳಿಸಿದ್ದಾರೆ.
ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಕಾಶು ಚಿತ್ರಗಂ ಪ್ರದೇಶದಲ್ಲಿ ಉಗ್ರರು ಇರುವುದನ್ನು ಖಚಿತಪಡಿಸಿಕೊಂಡ ಸೇನೆ, ಆ ಪ್ರದೇಶವನ್ನು ಸುತ್ತುವರಿದಿದೆ. ಈ ವೇಳೆ ಭದ್ರತಾಪಡೆಗಳು ಹಾಗೂ ಉಗ್ರರ ನಡುವೆ ಗುಂಡಿನ ಕಾಳಗ ನಡೆದಿದ್ದು, ಸೇನೆಯು ಓರ್ವ ಉಗ್ರನನ್ನು ಎನ್ಕೌಂಟರ್ ಮಾಡಿದೆ.