ಶ್ರೀನಗರ: ಜಮ್ಮು ಕಾಶ್ಮೀರದ ಬಂಡಿಪೋರಾದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಓರ್ವ ಪಾಕ್ ಭಯೋತ್ಪಾದಕ ಸೇರಿದಂತೆ ಮೂವರು ಉಗ್ರರನ್ನು ಸದೆಬಡಿದಿದೆ.
ಬಂಡಿಪೋರಾದ ಚಂದಾಜಿ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಕುರಿತು ಮಾಹಿತಿ ತಿಳಿದುಬರುತ್ತಿದ್ದಂತೆಯೇ ಭಾರತೀಯ ಸೇನಾಪಡೆ ಕಾರ್ಯಾಚರಣೆ ಶುರು ಮಾಡಿತ್ತು. ಉಗ್ರ ಸಂಹಾರದ ಕಾರ್ಯಾಚರಣೆ ಆರಂಭವಾಗುತ್ತಿದ್ದಂತೆ ಅಡಗಿ ಕುಳಿತಿದ್ದ ಉಗ್ರರು ಸೇನಾಪಡೆ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದಾರೆ.