ಕರ್ನಾಟಕ

karnataka

ETV Bharat / bharat

ಲಂಚ ಪಡೆದ ಆರೋಪ.. ಜಾರಿ ನಿರ್ದೇಶನಾಲಯದ ಅಧಿಕಾರಿ ಬಂಧನ - Madurai

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಸ್ಥಳೀಯ ವೈದ್ಯರೊಬ್ಬರಿಗೆ 20 ಲಕ್ಷ ರೂಪಾಯಿ ಲಂಚ ಕೇಳಿದ ಆರೋಪದಲ್ಲಿ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿ ಅಂಕಿತ್ ತಿವಾರಿ ಎಂಬುವವರನ್ನು ಬಂಧಿಸಲಾಗಿದೆ.

ದಿಂಡಿಗಲ್
ದಿಂಡಿಗಲ್

By ETV Bharat Karnataka Team

Published : Dec 1, 2023, 4:11 PM IST

ದಿಂಡಿಗಲ್ (ತಮಿಳುನಾಡು) :ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಶುಕ್ರವಾರ ಬೆಳಕಿಗೆ ಬಂದಿದೆ. ಇಲ್ಲಿನ ಸ್ಥಳೀಯ ವೈದ್ಯರೊಬ್ಬರಿಗೆ 20 ಲಕ್ಷ ರೂಪಾಯಿ ಲಂಚ ಕೇಳಿದ ಆರೋಪದಲ್ಲಿ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿ ಅಂಕಿತ್ ತಿವಾರಿ ಎಂಬುವವರನ್ನು ಬಂಧಿಸಲಾಗಿದೆ.

ಎಸ್​ಪಿ ಸರವಣನ್ ನೇತೃತ್ವದ ವಿಜಿಲೆನ್ಸ್ ಮತ್ತು ಭ್ರಷ್ಟಾಚಾರ ನಿಗ್ರಹ ನಿರ್ದೇಶನಾಲಯ (ಡಿವಿಎಸಿ) ತಂಡವು ಚೆಟ್ಟಿನಾಯ್ಕನ್ಪಟ್ಟಿ ಬಳಿ ಸಾಮಾನ್ಯ ತಪಾಸಣೆಯ ವೇಳೆ ವಾಹನ ತಡೆದಿದಿದ್ದಾರೆ. ಈ ವೇಳೆ ಅಂಕಿತ್ ತಿವಾರಿ ಬಳಿ ಸುಮಾರು 20 ಲಕ್ಷದಷ್ಟು ದಾಖಲೆ ಇಲ್ಲದ ಹಣ ಪತ್ತೆಯಾಗಿದೆ. ಅಲ್ಲದೇ, ಕೇಂದ್ರೀಯ ತನಿಖಾ ಸಂಸ್ಥೆ ನೀಡಿದ ಅಧಿಕೃತ ಗುರುತಿನ ಚೀಟಿಯೂ ಅವರಿಗೆ ಸಿಕ್ಕಿದೆ.

ಕೇಂದ್ರೀಯ ಏಜೆನ್ಸಿಯಿಂದ ನಡೆಯುತ್ತಿರುವ ತನಿಖೆಯ ಮೇಲೆ ಪ್ರಭಾವ ಬೀರಲು ಅಂಕಿತ್, ದಿಂಡಿಗಲ್ ಮೂಲದ ವೈದ್ಯರಿಗೆ ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಆರೋಪ ಕೇಳಿ ಬಂದಿದೆ. ಆಗ ಸಂಕಷ್ಟಕ್ಕೆ ಸಿಲುಕಿದ ವೈದ್ಯರು ಭ್ರಷ್ಟಾಚಾರಕ್ಕೆ ಮಣಿಯಲು ಸಿದ್ಧರಿಲ್ಲದೇ, DVAC ಗೆ ದೂರು ನೀಡಿ ಸಹಾಯ ಕೋರಿದ್ದರು. ಇದಾದ ನಂತರ ಅವರು ಕಾರ್ಯಾಚರಣೆ ನಡೆಸಿ ನಗದನ್ನು ವಶಪಡಿಸಿಕೊಂಡಿದ್ದಾರೆ.

ನಾಲ್ಕು ತಿಂಗಳ ಹಿಂದೆಯಷ್ಟೇ ನಾಗ್ಪುರದಿಂದ ಮಧುರೈಗೆ ವರ್ಗಾವಣೆಗೊಂಡಿರುವ ಅಂಕಿತ್ ಅವರು ಈಗ ಲಂಚ ಹಗರಣದಲ್ಲಿ ಭಾಗಿಯಾಗಿದ್ದಕ್ಕಾಗಿ ಕಾನೂನು ಕ್ರಮಗಳನ್ನು ಎದುರಿಸುತ್ತಿದ್ದಾರೆ. ಈ ಘಟನೆಯು ಕಾನೂನು ಜಾರಿ ಸಂಸ್ಥೆಗಳಲ್ಲಿ ಸಮಗ್ರತೆಯನ್ನು ಎತ್ತಿಹಿಡಿಯಲು ಕಠಿಣ ಕ್ರಮಗಳ ಅಗತ್ಯದ ಮೇಲೆ ಬೆಳಕು ಚೆಲ್ಲುತ್ತದೆ.

ಬಂಧಿತ ಅಧಿಕಾರಿಯು ಭ್ರಷ್ಟಾಚಾರ ಮತ್ತು ಲಂಚಕ್ಕೆ ಸಂಬಂಧಿಸಿದ ಆರೋಪಗಳನ್ನು ಎದುರಿಸುತ್ತಿದ್ದಾರೆ. ಈ ಪ್ರಕರಣ ಸಾರ್ವಜನಿಕ ಸೇವಾ ಸಂಸ್ಥೆಗಳಲ್ಲಿ ಅಧಿಕಾರಿಗಳ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಕಾಪಾಡಿಕೊಳ್ಳುವ ಅಗತ್ಯವನ್ನು ಒತ್ತಿ ಹೇಳುವಂತಿದೆ.

ಇದನ್ನೂ ಓದಿ:ಸೆನ್ಸಾರ್ ಸರ್ಟಿಫಿಕೇಟ್ ನೀಡಲು ಲಂಚ ಸ್ವೀಕರಿಸುತ್ತಿದ್ದ ಸೆನ್ಸಾರ್ ಮಂಡಳಿಯ ಪ್ರಾದೇಶಿಕ ಅಧಿಕಾರಿ ಸಿಬಿಐ ಬಲೆಗೆ

ಸೆನ್ಸಾರ್ ಮಂಡಳಿಯ ಪ್ರಾದೇಶಿಕ ಅಧಿಕಾರಿ ಸಿಬಿಐ ಬಲೆಗೆ (ಬೆಂಗಳೂರು) : ಸೆನ್ಸಾರ್ ಸರ್ಟಿಫಿಕೇಟ್ ನೀಡಲು ಚಿತ್ರತಂಡದಿಂದ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಸೆನ್ಸಾರ್ ಮಂಡಳಿಯ ಪ್ರಾದೇಶಿಕ ಅಧಿಕಾರಿಯನ್ನು ಸಿಬಿಐ ಅಧಿಕಾರಿಗಳ ತಂಡ ವಶಕ್ಕೆ (ನವೆಂಬರ್ 29-2023) ಪಡೆದಿತ್ತು. ಪ್ರಶಾಂತ್ ಕುಮಾರ್ ಸಿಬಿಐ ಬಲೆಗೆ ಬಿದ್ದಿರುವ ಸೆನ್ಸಾರ್ ಮಂಡಳಿಯ ಪ್ರಾದೇಶಿಕ ಅಧಿಕಾರಿ. ಅಡವಿ ಹೆಸರಿನ ಕನ್ನಡ ಚಲನಚಿತ್ರಕ್ಕೆ ಸೆನ್ಸಾರ್ ಸರ್ಟಿಫಿಕೇಟ್ ಕೊಡಲು 15 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದರು. 12 ಸಾವಿರ ರೂ. ಹಣ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಬಿಐ ಅಧಿಕಾರಿಗಳು‌ ಪ್ರಶಾಂತ್ ಕುಮಾರ್ ಅವರನ್ನು ವಶಕ್ಕೆ ಪಡೆದಿದ್ದರು.

ಅಡವಿ ಹೆಸರಿನ ಚಿತ್ರತಂಡ ಸೆನ್ಸಾರ್ ಸರ್ಟಿಫಿಕೇಟ್ ಪಡೆಯಲು ನವೆಂಬರ್ 21 ರಂದು ಮಲ್ಲೇಶ್ವರಂನ ಎಸ್ಆರ್​ವಿ ಸ್ಟುಡಿಯೋದಲ್ಲಿ ಚಿತ್ರದ ಪ್ರದರ್ಶನ ಆಯೋಜಿಸಿತ್ತು. ಚಿತ್ರ ವೀಕ್ಷಿಸಿದ್ದ ಸೆನ್ಸಾರ್ ಮಂಡಳಿಯ ಪ್ರಾದೇಶಿಕ ಅಧಿಕಾರಿ ಪ್ರಶಾಂತ್ ಕುಮಾರ್, ಕ್ಷುಲ್ಲಕ ವಿಚಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೇ ಚಿತ್ರಕ್ಕೆ ಸೆನ್ಸಾರ್ ಸರ್ಟಿಫಿಕೇಟ್ ನೀಡಲು 15 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎಂಬ ಆರೋಪ ಕೇಳಿಬಂದಿತ್ತು.

ABOUT THE AUTHOR

...view details