ಕರ್ನಾಟಕ

karnataka

ETV Bharat / bharat

ಆಸಿಯಾನ್‌ನೊಂದಿಗೆ ಸಂಪರ್ಕ ಹೆಚ್ಚಿಸುವುದು ಭಾರತಕ್ಕೆ ಪ್ರಮುಖ ಆದ್ಯತೆ: ಪ್ರಧಾನಿ ಮೋದಿ - ಭಾರತ ಮತ್ತು ಆಸಿಯಾನ್ ರಾಷ್ಟ್ರಗಳ ನಡುವಿನ ವರ್ಚುವಲ್ ಶೃಂಗಸಭೆ

ಭಾರತ ಮತ್ತು ಆಸಿಯಾನ್ ನಡುವಿನ ಭೌತಿಕ, ಆರ್ಥಿಕ, ಸಾಮಾಜಿಕ, ಡಿಜಿಟಲ್, ಹಣಕಾಸು, ಕಡಲು ಹೀಗೆ ಪ್ರತಿಯೊಂದು ರೀತಿಯ ಸಂಪರ್ಕವನ್ನು ಹೆಚ್ಚಿಸುವುದು ನಮಗೆ ಪ್ರಮುಖ ಆದ್ಯತೆಯಾಗಿದೆ. ಕಳೆದ ಕೆಲವು ವರ್ಷಗಳಲ್ಲಿ, ನಾವು ಇದನ್ನು ಸಾಧಿಸುತ್ತಾ ಬಂದಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

modi
modi

By

Published : Nov 12, 2020, 9:26 PM IST

ನವದೆಹಲಿ: 10 ರಾಷ್ಟ್ರಗಳ ಆಸಿಯಾನ್ ಗುಂಪಿನೊಂದಿಗೆ ಸಾಮಾಜಿಕ, ಡಿಜಿಟಲ್ ಮತ್ತು ಆರ್ಥಿಕ ಕ್ಷೇತ್ರಗಳನ್ನು ಒಳಗೊಂಡಂತೆ ಎಲ್ಲಾ ರೀತಿಯ ಸಂಪರ್ಕವನ್ನು ಹೆಚ್ಚಿಸುವುದು ಭಾರತಕ್ಕೆ ಪ್ರಮುಖ ಆದ್ಯತೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಭಾರತ ಮತ್ತು ಆಸಿಯಾನ್ ರಾಷ್ಟ್ರಗಳ ನಡುವಿನ ವರ್ಚುವಲ್ ಶೃಂಗಸಭೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ. "ಎಲ್ಲಾ ಪ್ರದೇಶಗಳ ಸುರಕ್ಷತೆ ಮತ್ತು ಬೆಳವಣಿಗೆಗೆ ಒಗ್ಗೂಡಿಸುವ ಮತ್ತು ಸ್ಪಂದಿಸುವ ಆಸಿಯಾನ್ ಅಗತ್ಯವಿದೆ" ಎಂದು ಮೋದಿ ಹೇಳಿದರು.

"ಭಾರತ ಮತ್ತು ಆಸಿಯಾನ್ ನಡುವಿನ ಭೌತಿಕ, ಆರ್ಥಿಕ, ಸಾಮಾಜಿಕ, ಡಿಜಿಟಲ್, ಹಣಕಾಸು, ಕಡಲು ಹೀಗೆ ಪ್ರತಿಯೊಂದು ರೀತಿಯ ಸಂಪರ್ಕವನ್ನು ಹೆಚ್ಚಿಸುವುದು ನಮಗೆ ಪ್ರಮುಖ ಆದ್ಯತೆಯಾಗಿದೆ. ಕಳೆದ ಕೆಲವು ವರ್ಷಗಳಲ್ಲಿ, ನಾವು ಇದನ್ನು ಸಾಧಿಸುತ್ತಾ ಬಂದಿದ್ದೇವೆ" ಎಂದು ಅವರು ಹೇಳಿದರು .

ಆಗ್ನೇಯ ಏಷ್ಯಾ ರಾಷ್ಟ್ರಗಳ ಸಂಘವನ್ನು (ಆಸಿಯಾನ್) ಈ ಪ್ರದೇಶದ ಅತ್ಯಂತ ಪ್ರಭಾವಶಾಲಿ ಗುಂಪುಗಳಲ್ಲಿ ಒಂದೆಂದು ಪರಿಗಣಿಸಲಾಗಿದ್ದು, ಭಾರತ, ಯುಎಸ್, ಚೀನಾ, ಜಪಾನ್ ಮತ್ತು ಆಸ್ಟ್ರೇಲಿಯಾ ಸೇರಿದಂತೆ ಹಲವಾರು ದೇಶಗಳು ಇದರ ಪಾಲುದಾರರಾಗಿದ್ದಾರೆ. ಇಂಡೋನೇಷ್ಯಾ, ಮಲೇಷ್ಯಾ, ಫಿಲಿಪೈನ್ಸ್, ಸಿಂಗಾಪುರ್, ಥೈಲ್ಯಾಂಡ್, ಬ್ರೂನಿ, ವಿಯೆಟ್ನಾಂ, ಲಾವೋಸ್, ಮ್ಯಾನ್ಮಾರ್ ಮತ್ತು ಕಾಂಬೋಡಿಯಾ ಇದರ ಇತರ ಸದಸ್ಯ ರಾಷ್ಟ್ರಗಳು.

ಭಾರತ ಮತ್ತು ಆಸಿಯಾನ್ ನಡುವಿನ ಸಂಬಂಧಗಳು ಕಳೆದ ಕೆಲವು ವರ್ಷಗಳಿಂದ ವ್ಯಾಪಾರ, ಹೂಡಿಕೆ, ಭದ್ರತೆ ಮತ್ತು ರಕ್ಷಣಾ ಕ್ಷೇತ್ರಗಳಲ್ಲಿ ಸಹಕಾರವನ್ನು ಹೆಚ್ಚಿಸುವತ್ತ ಗಮನ ಹರಿಸುತ್ತಿವೆ.

ವಿವಾದಿತ ದಕ್ಷಿಣ ಚೀನಾ ಸಮುದ್ರದಲ್ಲಿ ಮತ್ತು ಪೂರ್ವ ಲಡಾಕ್‌ನಲ್ಲಿ ಚೀನಾದ ಆಕ್ರಮಣಕಾರಿ ವರ್ತನೆಯ ಕುರಿತು ಶೃಂಗಸಭೆ ನಡೆಯುತ್ತಿದೆ. ದಕ್ಷಿಣ ಚೀನಾ ಸಮುದ್ರದಲ್ಲಿ ಹಲವಾರು ಆಸಿಯಾನ್ ರಾಷ್ಟ್ರಗಳು ಚೀನಾದೊಂದಿಗೆ ಪ್ರಾದೇಶಿಕ ವಿವಾದಗಳನ್ನು ಹೊಂದಿವೆ.

ABOUT THE AUTHOR

...view details