ಮೇಷ:ಈ ವಾರದಲ್ಲಿ ನೀವು ಒಂದಷ್ಟು ಸಮಯವನ್ನು ಗೆಳೆಯರೊಂದಿಗೆ ಕಳೆಯಲಿದ್ದು ಅವರೊಂದಿಗೆ ನಿಮ್ಮ ಸುಖ ದುಃಖವನ್ನು ಹಂಚಿಕೊಳ್ಳಲಿದ್ದೀರಿ. ನಿಮ್ಮ ಗೆಳೆಯರು ಮತ್ತು ಕುಟುಂಬದ ಸದಸ್ಯರೊಂದಿಗೆ ಧಾರ್ಮಿಕ ಪ್ರವಾಸಕ್ಕೆ ಹೋಗುವ ಯೋಜನೆಯನ್ನು ರೂಪಿಸಲಿದ್ದು ಎಲ್ಲರೂ ಸಂತಸ ಅನುಭವಿಸಲಿದ್ದೀರಿ. ನಿಮ್ಮ ಮನಸ್ಸಿಗೆ ಶಾಂತಿ ಲಭಿಸಲಿದೆ. ಈ ವಾರದಲ್ಲಿ ನಿಮ್ಮ ಬಾಕಿ ಉಳಿದಿರುವ ಕೆಲಸವು ಪೂರ್ಣಗೊಳ್ಳಲಿದೆ. ನಿಮ್ಮ ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ಮಂಗಳದಾಯಕ ಕಾರ್ಯಗಳು ನಡೆಯಲಿದ್ದು ಸಾಕಷ್ಟು ಮಂದಿ ಸಂಬಂಧಿಗಳು ಬಂದು ಹೋಗಲಿದ್ದಾರೆ. ನಿಮ್ಮ ಮನೆಯ ಅಲಂಕಾರಕ್ಕೆ ಗಮನ ನೀಡಲಿದ್ದೀರಿ. ಕುಟುಂಬದಲ್ಲಿ ನೆಲೆಸಿದ್ದ ಮನಸ್ತಾಪವು ಈ ವಾರದಲ್ಲಿ ದೂರಗೊಳ್ಳಲಿದೆ. ಈ ವಾರದಲ್ಲಿ ನಿಮ್ಮ ಆಸಕ್ತಿಗೆ ಅನುಗುಣವಾಗಿ ನೀವು ಕೆಲಸ ಮಾಡಲಿದ್ದೀರಿ. ನಿಮ್ಮ ಕುಟುಂಬದ ಸದಸ್ಯರೊಂದಿಗೆ ನೀವು ಒಂದಷ್ಟು ಸಮಯವನ್ನು ಕಳೆಯಲಿದ್ದೀರಿ. ಇದರಿಂದ ನಾವು ಸಾಕಷ್ಟು ಕಲಿಯಲಿದ್ದು ಇದು ಭವಿಷ್ಯದಲ್ಲಿ ನಿಮಗೆ ಸಾಕಷ್ಟು ಉಪಯುಕ್ತ ಎನಿಸಲಿದೆ.
ವೃಷಭ:ಕೌಟುಂಬಿಕ ಬದುಕಿನಲ್ಲಿ ಎಲ್ಲರೂ ಸಂತಸ ಅನುಭವಿಸಲಿದ್ದಾರೆ. ನಿಮ್ಮ ಜೀವನ ಸಂಗಾತಿಯೊಂದಿಗೆ ನಿಮ್ಮ ಕುಟುಂಬದ ಏಳಿಗೆಗಾಗಿ ನೀವು ಕೆಲಸ ಮಾಡಲಿದ್ದೀರಿ. ಪ್ರೇಮಿಗಳು ಪರಸ್ಪರ ಅನುರಾಗದ ಕ್ಷಣಗಳನ್ನು ಕಳೆಯಲಿದ್ದಾರೆ. ಇಬ್ಬರ ನಡುವೆಯೂ ಪ್ರೇಮವು ನೆಲೆಸಲಿದೆ. ಈ ವಾರದಲ್ಲಿ ನೀವು ಆದಾಯದ ಹೊಸ ಮೂಲವನ್ನು ಪಡೆಯಲಿದ್ದೀರಿ. ಇದರಿಂದ ನೀವು ಲಾಭ ಗಳಿಸಲಿದ್ದು ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಉಂಟಾಗಲಿದೆ. ನೀವು ಒಂದಷ್ಟು ಹೂಡಿಕೆಯನ್ನು ಮಾಡಲಿದ್ದು ಇದರಿಂದ ಭವಿಷ್ಯದಲ್ಲಿ ಲಾಭ ಉಂಟಾಗಲಿದೆ. ವ್ಯವಹಾರವನ್ನು ಮುಂದಕ್ಕೆ ಕೊಂಡೊಯ್ಯುವಲ್ಲಿ ಯಶಸ್ವಿಯಾಗಲಿದ್ದೀರಿ. ನಿಮ್ಮ ಗೆಳೆಯರು ನಿಮ್ಮನ್ನು ಬೆಂಬಲಿಸಲಿದ್ದಾರೆ. ವಿದ್ಯಾರ್ಥಿಗಳು ಕಠಿಣ ಶ್ರಮ ತೋರಲಿದ್ದು ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಲಿದ್ದಾರೆ. ನಿಮ್ಮ ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ನಿಮ್ಮ ದೈನಂದಿನ ಚಟುವಟಿಕೆಗಳಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡಲಿದ್ದು ಇದರಿಂದ ನಿಮಗೆ ಒಳಿತಾಗಲಿದೆ. ಈ ವಾರದಲ್ಲಿ ನಿಮ್ಮ ಕುಟುಂಬದ ಸದಸ್ಯರೊಂದಿಗೆ ಶಾಪಿಂಗ್ ಗೆ ಹೋಗಲಿದ್ದು ಅಲ್ಲಿ ಸಾಕಷ್ಟು ಮೋಜನ್ನು ಅನುಭವಿಸಲಿದ್ದೀರಿ.
ಮಿಥುನ:ನಿಮ್ಮ ಕೌಟುಂಬಿಕ ಜೀವನದಲ್ಲಿ ಸಾಕಷ್ಟು ಪ್ರೀತಿ ಮತ್ತು ಶಾಂತಿ ಕಾಣಿಸಿಕೊಳ್ಳಲಿದೆ. ಈ ವಾರದಲ್ಲಿ ನಿಮ್ಮ ಜೀವನ ಸಂಗಾತಿಯು ಏನಾದರೂ ಹೊಸ ಕೆಲಸವನ್ನು ಪ್ರಾರಂಭಿಸಲಿದ್ದು ನೀವು ಅವರನ್ನು ಸಂಪೂರ್ಣವಾಗಿ ಬೆಂಬಲಿಸಲಿದ್ದೀರಿ. ನಿಮ್ಮ ಭಾವನೆಗಳನ್ನು ಪ್ರೇಮಿಗೆ ವ್ಯಕ್ತಪಡಿಸಲಿದ್ದೀರಿ. ಇದರಿಂದ ಅವರು ಸಂತಸಗೊಳ್ಳಲಿದ್ದಾರೆ. ಉದ್ಯೋಗದಲ್ಲಿ ತೊಡಗಿಸಿಕೊಂಡಿರುವವರು ತಮ್ಮ ಕೆಲಸದಲ್ಲಿ ದೊರೆಯುವ ಭಡ್ತಿಯ ಕುರಿತು ಸಂತಸ ಅನುಭವಿಸಲಿದ್ದಾರೆ. ಅತ್ಮವಿಶ್ವಾಸದಲ್ಲಿ ವೃದ್ಧಿ ಉಂಟಾಗಲಿದೆ. ವ್ಯವಹಾರದಲ್ಲಿ ತೊಡಗಿಸಿಕೊಂಡಿರುವವರು ಈ ವಾರದಲ್ಲಿ ವ್ಯವಹಾರದಲ್ಲಿ ಕೆಲವೊಂದು ಹೊಸ ಯೋಜನೆಗಳನ್ನು ಅಳವಡಿಸಲಿದ್ದಾರೆ. ವಿದ್ಯಾರ್ಥಿಗಳ ಕುರಿತು ಮಾತನಾಡುವುದಾದರೆ, ಈ ವಾರದಲ್ಲಿ ಅವರು ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಸಿದ್ಧತೆ ನಡೆಸಲಿದ್ದು ಅದರಲ್ಲಿ ಯಶಸ್ಸನ್ನು ಪಡೆಯಲಿದ್ದಾರೆ. ಆರೋಗ್ಯದ ವಿಚಾರದಲ್ಲಿ ಹೇಳುವುದಾದರೆ, ಈ ವಾರದಲ್ಲಿ ಹೆಚ್ಚೇನೂ ಬದಲಾವಣೆ ಉಂಟಾಗದು. ಹವಾಮಾನದಲ್ಲಿ ಬದಲಾವಣೆ ಉಂಟಾಗುವ ಕಾರಣ ನಿಮ್ಮ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗಲಿದ್ದು ಇದು ನಿಮ್ಮ ಚಿಂತೆಗೆ ಕಾರಣವೆನಿಸಲಿದೆ. ನಿಮ್ಮ ದೈನಂದಿನ ಚಟುವಟಿಕೆಗಳಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡಿದರೆ ನಿಮಗೆ ಒಳಿತಾಗಲಿದೆ. ಮನೆಯಲ್ಲಿ ಮಂಗಳದಾಯಕ ಕಾರ್ಯಕ್ರಮಗಳನ್ನು ಅಯೋಜಿಸಬಹುದು.
ಕರ್ಕಾಟಕ:ಉದ್ಯೋಗದಲ್ಲಿರುವ ಜನರು ತಮ್ಮ ಕೆಲಸದಲ್ಲಿ ಪ್ರಗತಿ ಕಾಣಲಿದ್ದಾರೆ. ಈ ವಾರದಲ್ಲಿ ಕುಟುಂಬದ ಸದಸ್ಯರೊಂದಿಗೆ ನೀವು ಒಂದಷ್ಟು ಸಮಯವನ್ನು ಕಳೆಯಲಿದ್ದೀರಿ. ಇದು ನಿಮ್ಮ ಮನಸ್ಸಿಗೆ ನೆಮ್ಮದಿ ನೀಡಲಿದೆ. ವ್ಯವಹಾರದಲ್ಲಿ ಏರುಪೇರು ಉಂಟಾಗಲಿದೆ. ಇದು ನಿಮ್ಮ ಚೀಂತೆಗೆ ಕಾರಣವೆನಿಸಬಹುದು. ಆದರೆ ಹಿರಿಯ ಸದಸ್ಯರು ನಿಮ್ಮ ವ್ಯವಹಾರಕ್ಕಾಗಿ ಒಂದಷ್ಟು ಹಣವನ್ನು ಖರ್ಚು ಮಾಡಲಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಪ್ರಗತಿ ಉಂಟಾಗಲಿದೆ. ಕಲಾತ್ಮಕ ಮತ್ತು ಸೃಜನಶೀಲ ಕ್ಷೇತ್ರಗಳಲ್ಲಿ ಬೆಳವಣಿಗೆ ಕಾಣಿಸಿಕೊಳ್ಳಲಿದೆ. ಈ ವಾರದಲ್ಲಿ ನಿಮ್ಮ ಕುಟುಂಬದ ಸದಸ್ಯರ ಜೊತೆ ಸಮಯವನ್ನು ಕಳೆಯಲಿದ್ದೀರಿ. ನಿಮ್ಮ ಮಗುವಿನಿಂದ ಶುಭ ಸುದ್ದಿಯನ್ನು ನೀವು ಪಡೆಯಲಿದ್ದು ಇದರಿಂದ ನಿಮ್ಮ ಮನಸ್ಸಿಗೆ ಸಂತಸ ಲಭಿಸಲಿದೆ. ನಿಮ್ಮ ಆರೋಗ್ಯದಲ್ಲಿ ಸುಧಾರಣೆ ಉಂಟಾಗಲಿದೆ. ಈ ವಾರದಲ್ಲಿ ತಮ್ಮ ವೃತ್ತಿಯ ಕುರಿತು ಯುವಜನರು ಸಾಕಷ್ಟು ಸಂತಸ ಅನುಭವಿಸಲಿದ್ದಾರೆ. ಉದ್ಯೋಗಕ್ಕಾಗಿ ಅತ್ತಿತ್ತ ಅಲೆದಾಡುತ್ತಿರುವ ಜನರು ಈ ವಾರದಲ್ಲಿ ಒಳ್ಳೆಯ ಉದ್ಯೋಗವನ್ನು ಪಡೆಯಲಿದ್ದಾರೆ.
ಸಿಂಹ:ಪ್ರೇಮ ಸಂಬಂಧದಲ್ಲಿರುವವರು ತಮ್ಮ ಪ್ರೇಮ ಸಂಗಾತಿಯ ಸಾಂಗತ್ಯದಲ್ಲಿ ಸಂತಸದ ಜೀವನ ಸಾಗಿಸಲಿದ್ದಾರೆ. ಪರಸ್ಪರ ಪ್ರೀತಿಯ ಪ್ರಮಾಣ ಮತ್ತು ಭರವಸೆಯನ್ನು ನೀಡಲಿದ್ದಾರೆ. ವಿವಾಹಿತ ವ್ಯಕ್ತಿಗಳು ತಮ್ಮ ಜೀವನ ಸಂಗಾತಿಯ ಸಹಾಯದಿಂದ ಕೆಲವೊಂದು ಹೊಸ ಕೆಲಸಗಳನ್ನು ಮಾಡಲಿದ್ದು ಇದರಿಂದಾಗಿ ಅವರ ಆತ್ಮವಿಶ್ವಾಸದಲ್ಲಿ ವೃದ್ಧಿ ಉಂಟಾಗಲಿದೆ. ಶಿಕ್ಷಣ ಕ್ಷೇತ್ರದಲ್ಲಿ ಪ್ರಗತಿ ಉಂಟಾಗಲಿದೆ. ವ್ಯವಹಾರದಲ್ಲಿ ತೊಡಗಿಸಿಕೊಂಡವರು ತಮ್ಮ ವ್ಯವಹಾರವನ್ನು ಮುಂದಕ್ಕೆ ಒಯ್ಯಲು ಯತ್ನಿಸಲಿದ್ದಾರೆ. ಈ ವಾರದಲ್ಲಿ ನೀವು ಆದಾಯದ ಹೊಸ ಮೂಲವನ್ನು ಪಡೆಯಲಿದ್ದೀರಿ. ಇದರಿಂದ ನೀವು ಲಾಭ ಗಳಿಸಲಿದ್ದು ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಉಂಟಾಗಲಿದೆ. ನೀವು ಹೊಸ ಮನೆ, ಅಂಗಡಿ, ಕಟ್ಟಡ ಇತ್ಯಾದಿಗಳನ್ನು ಖರೀದಿಸಲು ಯತ್ನಿಸಲಿದ್ದೀರಿ. ನಿಮ್ಮ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಳ್ಳಬಹುದು. ನಿಮ್ಮ ದಿನಚರಿಯಲ್ಲಿ ಯೋಗ ಮತ್ತು ಧ್ಯಾನವನ್ನು ಸೇರಿಸಿಕೊಳ್ಳಲಿದ್ದೀರಿ. ನಿಮ್ಮ ಆಹಾರದ ಕಡೆಗೆ ಹೆಚ್ಚಿನ ಗಮನ ನೀಡಲಿದ್ದೀರಿ. ಈ ವಾರದಲ್ಲಿ ನಿಮ್ಮ ಮಕ್ಕಳೊಂದಿಗೆ ಒಂದಷ್ಟು ಸಮಯವನ್ನು ಕಳೆಯಲಿದ್ದೀರಿ.
ಕನ್ಯಾ:ವೈವಾಹಿಕ ಬದುಕಿನಲ್ಲಿ ಸಂತಸ ನೆಲೆಸಲಿದೆ. ನಿಮ್ಮ ಜೀವನ ಸಂಗಾತಿಯ ಸಂಪೂರ್ಣ ಸಹಕಾರ ಪಡೆಯಲಿದ್ದೀರಿ. ಪ್ರೇಮದ ಸಂಬಂಧದಲ್ಲಿರುವ ಜನರು ತಮ್ಮ ಭಾವನೆಗಳನ್ನು ವ್ಯಕ್ತಪಡಿಸಲಿದ್ದಾರೆ. ಈ ವಾರದಲ್ಲಿ ನೀವು ವ್ಯವಹಾರದಲ್ಲಿ ಕೆಲವೊಂದು ಹೊಸ ಯೋಜನೆಗಳನ್ನು ಪಡೆಯಲಿದ್ದೀರಿ. ಇದರಿಂದಾಗಿ ಲಾಭವನ್ನು ಗಳಿಸುವಲ್ಲಿ ಯಶಸ್ವಿಯಾಗಲಿದ್ದೀರಿ. ಆರ್ಥಿಕ ಸ್ಥಿತಿಯು ಉತ್ತಮವಾಗಿರಲಿದೆ. ಕಚೇರಿಗೆ ಸಂಬಂಧಿಸಿದ ಪ್ರಯಾಣಕ್ಕೆ ನೀವು ಹೋಗಲಿದ್ದು ನಿಮ್ಮ ಪಾಲಿಗೆ ಇದು ಲಾಭ ತರಲಿದೆ. ವಿದ್ಯಾರ್ಥಿಗಳು ಸ್ಪರ್ಧೆಗಳಿಗಾಗಿ ಪೂರ್ವಸಿದ್ಧತೆ ಮಾಡಿಕೊಳ್ಳಲಿದ್ದಾರೆ. ವಿದ್ಯಾರ್ಥಿಗಳು ಅನಗತ್ಯ ವಿಚಾರಗಳಿಗೆ ಗಮನ ನೀಡುವ ಕಾರಣ ಅಧ್ಯಯನಕ್ಕೆ ಗಮನ ನೀಡಲು ಅವರಿಗೆ ಸಾಧ್ಯವಾಗದು. ಪೋಷಕರಿಗೆ ತಮ್ಮ ಮಕ್ಕಳ ಭವಿಷ್ಯದ ಚಿಂತೆ ಕಾಡಬಹುದು. ಅರೋಗ್ಯದಲ್ಲಿ ಸುಧಾರಣೆ ಉಂಟಾಗಲಿದೆ. ಮನೆಯಲ್ಲಿ ಪೂಜೆ ಪುನಸ್ಕಾರ, ಹವನ ಇತ್ಯಾದಿಗಳನ್ನು ಆಯೋಜಿಸುವ ಸಾಧ್ಯತೆ ಇದ್ದು ಇದರಲ್ಲಿ ಎಲ್ಲರೂ ಸಕ್ರಿಯವಾಗಿ ಪಾಲ್ಗೊಳ್ಳಲಿದ್ದಾರೆ. ನಿಮಗಾಗಿ ಮತ್ತು ನಿಮ್ಮ ಕುಟುಂಬಕ್ಕಾಗಿ ಒಂದಷ್ಟು ಶಾಪಿಂಗ್ ಮಾಡಲಿದ್ದೀರಿ. ಈ ವಾರದಲ್ಲಿ ನಿಮಗೆ ಸಾಕಷ್ಟು ಸಂತಸ ದೊರೆಯಲಿದೆ.