ನವದೆಹಲಿ: ಅಂತಾರಾಷ್ಟ್ರೀಯ ಹಣಕಾಸು ನಿಧಿಯ (ಐಎಂಎಫ್) ಕಾರ್ಯನಿರ್ವಾಹಕ ನಿರ್ದೇಶಕರಾಗಿ ಭಾರತದ ಮಾಜಿ ಮುಖ್ಯ ಆರ್ಥಿಕ ಸಲಹೆಗಾರ ಡಾ. ಕೆ ಕೃಷ್ಣಮೂರ್ತಿ ಸುಬ್ರಮಣಿಯನ್ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ.
ಕ್ಯಾಬಿನೆಟ್ ನೇಮಕಾತಿ ಸಮಿತಿ (ಎಸಿಸಿ) ಗುರುವಾರ ಹೊರಡಿಸಿದ ಆದೇಶದಲ್ಲಿ, ಕೆ ಸುಬ್ರಮಣಿಯನ್ ಅವರು ನವೆಂಬರ್ 1 ರಿಂದ ಪ್ರಾರಂಭವಾಗುವ ಮೂರು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೂ ಐಎಂಎಎಫ್ ಕಾರ್ಯನಿರ್ವಾಹಕ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ ಎಂದು ತಿಳಿಸಿದೆ.
ಇದನ್ನೂ ಓದಿ:ಮೈಸೂರಿಗೆ ಆಗಮಿಸಿ ತಂದೆ ಹುಟ್ಟುಹಬ್ಬ ಆಚರಿಸಿದ IMF ಪ್ರಥಮ ಉಪಮುಖ್ಯಸ್ಥೆ ಗೀತಾ ಗೋಪಿನಾಥ್