ನವದೆಹಲಿ : ಸೋಷಿಯಲ್ ಮೀಡಿಯಾ ದೈತ್ಯ ಫೇಸ್‌ಬುಕ್ ಪೂರ್ವಭಾವಿಯಾಗಿ ಮತ್ತು ತ್ವರಿತವಾಗಿ ವರ್ತಿಸಿದ್ದರೆ ಈ ವರ್ಷದ ಫೆಬ್ರವರಿಯಲ್ಲಿ ದೆಹಲಿಯಲ್ಲಿ ನಡೆದ ಹಿಂಸಾಚಾರವನ್ನು ಸುಲಭವಾಗಿ ತಪ್ಪಿಸಬಹುದಿತ್ತು ಎಂದು ಮಾಜಿ ಫೇಸ್‌ಬುಕ್ ಉದ್ಯೋಗಿಯೊಬ್ಬರು ದೆಹಲಿ ಅಸೆಂಬ್ಲಿ ಪ್ಯಾನೆಲ್‌ಗೆ ತಿಳಿಸಿದ್ದಾರೆ.
ಈ ವರ್ಷದ ಆರಂಭದಲ್ಲಿ ದೆಹಲಿಯಲ್ಲಿ ನಡೆದ ಗಲಭೆಗೆ ಸಾಮಾಜಿಕ ಮಾಧ್ಯಮವೇ ಕಾರಣ ಎಂದು ಆರೋಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷದ ಮುಖಂಡ ರಾಘವ್ ಚಾಧಾ ನೇತೃತ್ವದ ಶಾಂತಿ ಮತ್ತು ಸಾಮರಸ್ಯ ಸಮಿತಿ ಮಾಜಿ ಫೇಸ್‌ಬುಕ್ ಉದ್ಯೋಗಿ ಮಾರ್ಕ್ ಎಸ್ ಲಕ್ಕಿಯನ್ನು ಕರೆಸಿಕೊಂಡಿದೆ.