ಮುಂಬೈ(ಮಹಾರಾಷ್ಟ್ರ): ಐಎನ್‌ಎಸ್ ವಿಕ್ರಾಂತ್ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಕಿರೀತ್ ಸೋಮಯ್ಯ ಮತ್ತು ಅವರ ಮಗ ನೀಲ್ ಸೇರಿದಂತೆ ಇತರರ ವಿರುದ್ಧ ಮಾಜಿ ಯೋಧರೊಬ್ಬರು ಟ್ರಾಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ವಂಚನೆ ದೂರಿನ ಮೇರೆಗೆ ಸೋಮಯ್ಯ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಕ್ರಾಂತ್ ಹಡಗಿನ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ನಡೆದಿದೆ ಎಂದು ಶಿವಸೇನೆ ಸಂಸದ ಸಂಜಯ್ ರಾವುತ್ ಆರೋಪಿಸಿದ್ದರು. ಮಾಜಿ ಸೈನಿಕ ಬಾಬನ್ ಭೋಸಲೆ ನಿನ್ನೆ ತಡರಾತ್ರಿ ಟ್ರಾಂಬೆ ಪೊಲೀಸ್ ಠಾಣೆಯಲ್ಲಿ ವಂಚನೆಯ ಬಗ್ಗೆ ದೂರು ದಾಖಲಿಸಿದ್ದಾರೆ. ಪೊಲೀಸರು ಕಿರೀತ್ ಸೋಮಯ್ಯ ಮತ್ತು ಅವರ ಮಗ ನಿಲ್ ವಿರುದ್ಧ ಸೆಕ್ಷನ್ 420, 406 ಮತ್ತು 34ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಓದಿ:ಅಣೆಕಟ್ಟು ನಾಡಿನಲ್ಲಿ ನೀರಿಗಾಗಿ ಹಾಹಾಕಾರ.. ಬಿಂದಿಗೆ ನೀರಿಗಾಗಿ ಪ್ರಾಣವನ್ನೇ ಪಣಕ್ಕಿಡುವ ನಾರಿಯರು!
ಏನಿದು ವಿವಾದ:ಶಿವಸೇನೆ ನಾಯಕ, ಸಂಸದ ಸಂಜಯ್ ರಾವತ್ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಮಂಗಳವಾರದಂದು ಜಪ್ತಿ ಮಾಡಿಕೊಂಡಿದೆ. 1,034 ಕೋಟಿ ಪತ್ರಾ ಚಾಲ್ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಯು ಸಂಜಯ್ ರಾವತ್ ಆಸ್ತಿಯನ್ನು ಜಪ್ತಿ ಮಾಡಿದೆ. ‘ನನ್ನ ಆಸ್ತಿಯನ್ನು ವಶಪಡಿಸಿಕೊಳ್ಳಲಿ, ನನ್ನನ್ನು ಶೂಟ್ ಮಾಡಲಿ ಅಥವಾ ಜೈಲಿಗೆ ಕಳುಹಿಸಲಿ. ಇದಕ್ಕೆ ನಾನು ಹೆದರುವುದಿಲ್ಲ. ಸತ್ಯಕ್ಕೆ ಜಯ ಸಿಗುತ್ತದೆ’ ಎಂದು ಸಂಜಯ್ ರಾವತ್ ಪ್ರತಿಕ್ರಿಯಿಸಿದ್ದರು.