ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಸಚಿವ ಸಂಪುಟದಲ್ಲಿ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆಯ ರಾಜ್ಯ ಸಚಿವರಾಗಿ ಸೇವೆ ಸಲಿಸಿದ್ದ ಸಂಸದ ಬಾಬುಲ್ ಸುಪ್ರಿಯೋ ದಿಢೀರ್ ರಾಜಕೀಯ ನಿವೃತ್ತಿ ಪಡೆದುಕೊಂಡಿದ್ದಾರೆ. ಅವರ ನಡೆ ತೀವ್ರ ಚರ್ಚೆಗೆ ಗ್ರಾಸವಾಗಿದೆ.
‘goodbye' ರಾಜಕೀಯಕ್ಕೆ ದಿಢೀರ್ ನಿವೃತ್ತಿ ಘೋಷಿಸಿದ BJP MP ಬಾಬುಲ್ ಸುಪ್ರಿಯೋ! - ಸುಪ್ರಿಯೋ
ಪಶ್ಚಿಮ ಬಂಗಾಳದ ಬಿಜೆಪಿ ಸಂಸದ ಬಾಬುಲ್ ಸುಪ್ರಿಯೋ ರಾಜಕೀಯದಿಂದ ದಿಢೀರ್ ನಿವೃತ್ತಿ ಪಡೆದುಕೊಂಡಿದ್ದು, ಇದರ ಬಗ್ಗೆ ಫೇಸ್ಬುಕ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಕಳೆದ ಕೆಲ ತಿಂಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಸಚಿವ ಸಂಪುಟ ಪುನಾರಚನೆಯಾಗಿದ್ದ ಸಂದರ್ಭದಲ್ಲಿ ತಮ್ಮ ಸಚಿವ ಸ್ಥಾನಕ್ಕೆ ಸುಪ್ರಿಯೋ ರಾಜೀನಾಮೆ ನೀಡಿದ್ದರು. ಇದರ ಬೆನ್ನಲ್ಲೇ ಇದೀಗ ರಾಜಕೀಯದಿಂದ ನಿವೃತ್ತಿ ಪಡೆದುಕೊಳ್ಳುತ್ತಿರುವುದಾಗಿ ಘೋಷಣೆ ಮಾಡಿದ್ದಾರೆ. ಫೇಸ್ಬುಕ್ನಲ್ಲಿ ಮಾಹಿತಿ ಶೇರ್ ಮಾಡಿಕೊಂಡಿರುವ ಸುಪ್ರಿಯೋ, Goodbye.ನಾನು ಯಾವುದೇ ಪಕ್ಷ ಸೇರಿಕೊಳ್ಳುತ್ತಿಲ್ಲ. ಟಿಎಂಸಿ, ಕಾಂಗ್ರೆಸ್, ಸಿಪಿಐ(ಎಂ) ನನಗೆ ಫೋನ್ ಮಾಡಿಲ್ಲ. ಜೊತೆಗೆ ನಾನು ಎಲ್ಲಿಗೂ ಹೋಗುತ್ತಿಲ್ಲ. ಸಾಮಾಜಿಕ ಕೆಲಸ ಮಾಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿದ್ದೇನೆ ಎಂದಿದ್ದಾರೆ.
ಸುಪ್ರಿಯೊ ಇತ್ತೀಚೆಗೆ ಪಶ್ಚಿಮ ಬಂಗಾಳ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕೋಲ್ಕತ್ತಾದ ಟೋಲಿಗಂಜ್ ಕ್ಷೇತ್ರದಿಂದ ಸ್ಪರ್ಧೆ ಮಾಡಿ ಸೋಲು ಕಂಡಿದ್ದರು. ಇದಾದ ಬಳಿಕ ಸಕ್ರೀಯ ರಾಜಕೀಯದಿಂದ ಗಾಯಕ - ರಾಜಕಾರಣಿ ಸುಪ್ರಿಯೊ ಕಾಣೆಯಾಗಿದ್ದರು. ಇದೀಗ ದಿಢೀರ್ ನಿವೃತ್ತಿ ಪಡೆದುಕೊಂಡು ಅಚ್ಚರಿ ಮೂಡಿಸಿದ್ದಾರೆ.