ಸುಕ್ಮಾ: ದೀಪಾವಳಿ ರಜೆ ವಿಚಾರವಾಗಿ ನಡೆದ ಜಗಳದಲ್ಲಿ ನಾಲ್ವರು ಯೋಧರು ಪ್ರಾಣ ಕಳೆದುಕೊಂಡಿರುವ ಘಟನೆ ತೆಲಂಗಾಣ-ಛತ್ತೀಸ್‌ಗಢ ಗಡಿ ಭಾಗದಲ್ಲಿ ನಡೆದಿದೆ.
ರಜೆಗಾಗಿ ಸೈನಿಕರ ನಡುವೆ ಗುಂಡಿನ ಚಕಮಕಿ: ನಾಲ್ವರು ಸಾವು, ಮೂವರ ಸ್ಥಿತಿ ಗಂಭೀರ - jawans died news
ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯ ಲಿಂಗಂಪಲ್ಲಿ ಬೇಸ್ ಕ್ಯಾಂಪ್‌ನಲ್ಲಿ ದೀಪಾವಳಿ ರಜೆ ವಿಚಾರವಾಗಿ ಯೋಧರ ನಡುವೆ ನಡೆದ ಜಗಳದಲ್ಲಿ ನಾಲ್ವರು ಸೈನಿಕರು ಪರಸ್ಪರ ಗುಂಡು ಹಾರಿಸಿಕೊಂಡು ಪ್ರಾಣ ಕಳೆದುಕೊಂಡಿದ್ದಾರೆ.
ಇಂದು ಬೆಳಗ್ಗೆ ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯ ಲಿಂಗಂಪಲ್ಲಿ ಬೇಸ್ ಕ್ಯಾಂಪ್‌ನಲ್ಲಿ ಯೋಧರು ದೀಪಾವಳಿ ರಜೆಗಾಗಿ ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ಜಗಳ ತಾರಕಕ್ಕೇರಿದ್ದು ಪರಸ್ಪರ ಗನ್‌ಗಳಿಂದ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾರೆ.
ಬಿಹಾರದ ರಾಜಮಣಿ ಯಾದವ್, ದಾಂಜಿ ಮತ್ತು ಬಂಗಾಳದ ರಾಜುಮಂಡಲ್ ಎಂಬ ಸೈನಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಭದ್ರಾಚಲಂ ಏರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಈ ವೇಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಧರ್ಮೇಂದರ್ ಎಂಬ ಯೋಧ ಮೃತಪಟ್ಟಿದ್ದು, ಚಿಕಿತ್ಸೆ ಪಡೆಯುತ್ತಿರುವ ಇತರೆ ಯೋಧರ ಸ್ಥಿತಿ ಸಹ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.