ಕರ್ನಾಟಕ

karnataka

ETV Bharat / bharat

ಮದ್ಯ ನೀತಿ ಹಗರಣ: ಇಂದು ಮನೀಶ್​​ ಸಿಸೋಡಿಯಾ ಜಾಮೀನು ಅರ್ಜಿ ವಿಚಾರಣೆ - ಡಿಸಿಎಂ ಮನೀಶ್​ ಸಿಸೋಡಿಯಾ

ದೆಹಲಿ ಮಾಜಿ ಡಿಸಿಎಂ ಮನೀಶ್​ ಸಿಸೋಡಿಯಾ ಬಂಧನದಿಂದ ಬಿಡುಗಡೆ ಕೋರಿ ಜಾಮೀನು ಅರ್ಜಿ ಸಲ್ಲಿಸಿದ್ದು, ಇಂದು ವಿಚಾರಣೆ ನಡೆಯಲಿದೆ.

ಮನೀಶ್​​ ಸಿಸೋಡಿಯಾ ಜಾಮೀನು ಅರ್ಜಿ ವಿಚಾರಣೆ
ಮನೀಶ್​​ ಸಿಸೋಡಿಯಾ ಜಾಮೀನು ಅರ್ಜಿ ವಿಚಾರಣೆ

By

Published : Apr 6, 2023, 11:44 AM IST

ನವದೆಹಲಿ:ಅಬಕಾರಿ ನೀತಿ ಹರಣದಲ್ಲಿ ಜೈಲು ಶಿಕ್ಷೆಗೆ ಒಳಗಾಗಿರುವ ದೆಹಲಿ ಸರ್ಕಾರದ ಮಾಜಿ ಉಪಮುಖ್ಯಮಂತ್ರಿ ಮನೀಶ್​ ಸಿಸೋಡಿಯಾ ಅವರ ಜಾಮೀನು ಅರ್ಜಿಯ ವಿಚಾರಣೆ ಇಂದು ದಿಲ್ಲಿ ಹೈಕೋರ್ಟ್​ನಲ್ಲಿ ವಿಚಾರಣೆ ನಡೆಯಲಿದೆ. ಅರ್ಜಿಯನ್ನು ನ್ಯಾಯಮೂರ್ತಿ ದಿನೇಶ್ ಕುಮಾರ್ ಶರ್ಮಾ ಅವರ ಪೀಠದ ಮುಂದೆ ವಿಚಾರಣೆಗೆ ಬರಲಿದೆ.

ಸಿಸೋಡಿಯಾ ಬಂಧನವನ್ನು ವಿರೋಧಿಸಿ ಬುಧವಾರ ವಿರುದ್ಧ ಆಮ್​ ಆದ್ಮಿ ಪಕ್ಷ, ಆಡಳಿತಾರೂಢ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿತು. ವಿರೋಧ ಪಕ್ಷಗಳ ನಾಯಕರ ವಿರುದ್ಧ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಲಾಗುತ್ತಿದೆ ಎಂದು ಆರೋಪಿಸಲಾಯಿತು. ಸಿಸೋಡಿಯಾ ವಿರುದ್ಧ ಗಂಭೀರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ವಿಚಾರಣಾ ನ್ಯಾಯಾಲಯವು ಅವರ ಜಾಮೀನು ಅರ್ಜಿಯನ್ನು ಮಾರ್ಚ್​ 31 ರಂದು ವಜಾಗೊಳಿಸಿತ್ತು. ಹಗರಣದಲ್ಲಿ ಹಿರಿಯ ಎಎಪಿ ನಾಯಕ ಪ್ರಮುಖ ಆರೋಪಿ ಎಂದು ಸಿಬಿಐ ವಾದಿಸಿತ್ತು.

ಸಿಬಿಐ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ:ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಬಂಧನದಲ್ಲಿರುವ ದೆಹಲಿ ಸರ್ಕಾರದ ಮಾಜಿ ಉಪಮುಖ್ಯಮಂತ್ರಿಯ ನ್ಯಾಯಾಂಗ ಬಂಧನ ಅವಧಿಯನ್ನು ಸಿಬಿಐ ವಿಶೇಷ ನ್ಯಾಯಾಲಯ ಏಪ್ರಿಲ್‌ 17 ರವರೆಗೆ ವಿಸ್ತರಿಸಿ ಆದೇಶಿಸಿದೆ. ಮನೀಶ್​ ಸಿಸೋಡಿಯಾ ಅವರ ಬಂಧನ ಅವಧಿ ಏಪ್ರಿಲ್​ 3 ರಂದು ಮುಗಿದಿದ್ದ ಕಾರಣ ಅವರನ್ನು ಸಿಬಿಐ ಪೊಲೀಸರು ದಿಲ್ಲಿಯ ರೋಸ್ ಅವೆನ್ಯೂ ಕೋರ್ಟ್‌ಗೆ ಹಾಜರುಪಡಿಸಿದ್ದರು.

ಇದನ್ನೂ ಓದಿ:ಬಿಟ್ ಕಾಯಿನ್ ಪ್ರಕರಣದ ಆರೋಪಿಯ ಸಹೋದರನಿಗೆ ಲುಕ್‌ಔಟ್ ನೋಟಿಸ್ ಹಿಂಪಡೆಯುವ ಕುರಿತು ಪರಿಶೀಲಿಸಲು ’ಇಡಿ’ಗೆ ಹೈಕೋರ್ಟ್ ಸೂಚನೆ

ಹೆಚ್ಚಿನ ವಿಚಾರಣೆ ಅಗತ್ಯವಿರುವ ಕಾರಣ ಸಿಸೋಡಿಯಾ ಅವರನ್ನು ಇನ್ನಷ್ಟು ದಿನ ಬಂಧನಕ್ಕೆ ಒಳಪಡಿಸಬೇಕು ಎಂದು ಸಿಬಿಐ ಮನವಿ ಮಾಡಿತ್ತು. ಅದನ್ನು ಪುರಸ್ಕರಿಸಿದ ಸಿಬಿಐ ವಿಶೇಷ ನ್ಯಾಯಾಲಯ 14 ದಿನಗಳ ಕಾಲ ಬಂಧನವನ್ನು ವಿಸ್ತರಿಸಿತ್ತು.

ಅಬಕಾರಿ ನೀತಿ ಹಗರಣ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸೋಡಿಯಾ ಅವರನ್ನು ಕೇಂದ್ರೀಯ ತನಿಖಾ ದಳ(ಸಿಬಿಐ) ಮಾರ್ಚ್​ 6 ರಿಂದ ನ್ಯಾಯಾಂಗ ಬಂಧನಕ್ಕೆ ಪಡೆದಿದೆ. ಇದಕ್ಕೂ ಮೊದಲು ಅವರನ್ನು ಫೆಬ್ರವರಿ 26 ರಂದು ಪ್ರಕರಣದಡಿ ಬಂಧಿಸಲಾಗಿತ್ತು.

ಪ್ರಕರಣದ ಹಿನ್ನೆಲೆ ಹೀಗಿದೆ:ದೆಹಲಿ ಸರ್ಕಾರ ರೂಪಿಸಿದ್ದ ಹೊಸ ಮದ್ಯ ನೀತಿಯಲ್ಲಿ ಹಗರಣ ನಡೆಸಲಾಗಿದೆ. ಇದರಿಂದ ದಿಲ್ಲಿ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ನಷ್ಟವಾಗಿದೆ ಎಂದು ಲೆಫ್ಟಿನೆಂಟ್ ಗವರ್ನರ್ ಅವರು ದೂರು ನೀಡಿದ್ದರು. ಇದರ ಅನುಸಾರ ಸಿಬಿಐ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ.

ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಸೇರಿದಂತೆ ಒಟ್ಟು 15 ಮಂದಿಯನ್ನು ತಪ್ಪಿತಸ್ಥರು ಎಂದು ಹೆಸರಿಸಿದೆ. ಜಾರಿ ನಿರ್ದೇಶನಾಲಯ(ಇಡಿ) ಕೂಡ ಅಕ್ರಮ ಹಣ ವರ್ಗಾವಣೆ ಕೇಸ್​ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದೆ. ಈವರೆಗೂ ಒಟ್ಟು 9 ಮಂದಿಯನ್ನು ಬಂಧಿಸಿದೆ. ಇತ್ತ ಸಿಬಿಐ 4 ಮಂದಿಯನ್ನು ಬಂಧಿಸಿದೆ.

ಇದನ್ನೂ ಓದಿ:ದೆಹಲಿ ಅಬಕಾರಿ ನೀತಿ ಹಗರಣ: ಮನೀಶ್​ ಸಿಸೋಡಿಯಾ ಬಂಧನ 14 ದಿನ ವಿಸ್ತರಣೆ

ABOUT THE AUTHOR

...view details