ಕರ್ನಾಟಕ

karnataka

ETV Bharat / bharat

ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರಿಗೆ ಮೀಸಲಾತಿ ಬೇಕು : ಬಿಜೆಪಿ ನಾಯಕಿ, ಮುಲಾಯಂ ಸಿಂಗ್‌ ಸೊಸೆ ಅಪರ್ಣಾ ಸಂದರ್ಶನ

ಯುಪಿ ವಿಧಾನಸಭೆ ಚುನಾವಣೆ ಬೆನ್ನಲ್ಲೇ ಎಸ್ಪಿ ವರಿಷ್ಠ ಮುಲಾಯಂ ಸಿಂಗ್ ಯಾದವ್‌ ಅವರ ಸೊಸೆ ಅಪರ್ಣಾ ಬಿಜೆಪಿ ಸೇರಿದ್ದ ದಿನವೇ ಮಹಿಳೆಯರಿಗೆ ಎಲ್ಲಾ ಕ್ಷೇತ್ರಗಳಲ್ಲಿ ಮೀಸಲಾತಿ ನೀಡಬೇಕು. ಈ ಸಂಬಂಧ ಕೇಂದ್ರ ಸರ್ಕಾರ ಕಾಯ್ದೆ ತರಲಿ ಎಂದು ಒತ್ತಾಯಿಸಿದ್ದಾರೆ..

By

Published : Jan 19, 2022, 7:33 PM IST

Updated : Jan 19, 2022, 7:39 PM IST

BJP leader Aparna Yadav bats for women's reservation in all sectors
ಎಲ್ಲಾ ಕ್ಷೇತ್ರಗಳಲ್ಲೂ ಮಹಿಳಿಯರಿಗೆ ಮೀಸಲಾತಿ ಬೇಕು: ಬಿಜೆಪಿ ಸೇರಿದ ಮುಲಾಯಂ ಸಿಂಗ್‌ ಸೊಸೆ ಅಪರ್ಣಾ ಸಂದರ್ಶನ

ಲಖನೌ(ಉತ್ತರ ಪ್ರದೇಶ): ಮಹಿಳೆಯರ ಸಬಲೀಕರಣಕ್ಕಾಗಿ ಶೇ.50ರಷ್ಟು ಮೀಸಲಾತಿ ನೀಡಬೇಕು. ಮಹಿಳೆಯರು ಸ್ವಾವಲಂಬಿಗಳಾದರೆ ಅವರ ಮೇಲಿನ ದೌರ್ಜನ್ಯಗಳಂತಹ ಅಪರಾಧ ಪ್ರಕರಣಗಳು ಕಡಿಮೆಯಾಗುತ್ತವೆ ಎಂದು ಬಿಜೆಪಿ ನಾಯಕಿ ಅಪರ್ಣಾ ಯಾದವ್‌ ಹೇಳಿದ್ದಾರೆ.

ಇಂದು ಬೆಳಗ್ಗೆ ದೆಹಲಿಯಲ್ಲಿ ಬಿಜೆಪಿ ಸೇರಿರುವ ಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್‌ ಯಾದವ್‌ ಸೊಸೆ ಅಪರ್ಣಾ ಯಾದವ್‌ ಈಟಿವಿ ಭಾರತಕ್ಕೆ ಸಂದರ್ಶನ ನೀಡಿದ್ದಾರೆ.

ರಾಜಕೀಯ ಕ್ಷೇತ್ರದಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವಂತೆ ಪ್ರಧಾನಿ ಮೋದಿ ಸರ್ಕಾರವನ್ನು ಒತ್ತಾಯಿಸುತ್ತೇನೆ. ಮಹಿಳೆಯರಿಗೆ ಮೀಸಲಾತಿ ಕಾಯ್ದೆ ಜಾರಿಗೆ ಇತರೆ ರಾಜಕೀಯ ಪಕ್ಷಗಳು ಬೆಂಬಲ ನೀಡಬೇಕು.

ಮಹಿಳಾ ಕೋಟಾಗಾಗಿ ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಮಹಿಳಾ ಮೀಸಲಾತಿ ಮಸೂಧೆಯನ್ನು ಸಂಸತ್‌ನಲ್ಲಿ ಮಂಡನೆಗೆ ಮುಂದಾಗಬೇಕು. ಇತರೆ ರಾಜಕೀಯ ಪಕ್ಷಗಳು ಕೂಡ ಮಹಿಳಾ ಪ್ರತಿನಿಧಿಗಳ ಸಂಖ್ಯೆಯನ್ನು ಹೆಚ್ಚಿಸಲು ಪ್ರಯತ್ನಿಸಬೇಕು. ಆಗ ದೇಶ ರಾಜಕೀಯ ವ್ಯವಸ್ಥೆ ಮತ್ತಷ್ಟು ಬಲಗೊಳ್ಳುತ್ತದೆ ಎಂದು ಹೇಳಿದ್ದಾರೆ.

'ಅಯೋಧ್ಯೆ ದೇಣಿಗೆ ಹಣದ ಅವ್ಯವಹಾರ ಬೇಸರ ತರಿಸಿದೆ'

ಅಯೋಧ್ಯೆಯಲ್ಲಿ ಭೂ ಖರೀದಿ ಹಗರಣದ ಕುರಿತು ಮಾತನಾಡಿದ ಅಪರ್ಣಾ ಯಾದವ್‌, ಅಯೋಧ್ಯೆಯಲ್ಲಿನ ದೇವಾಲಯ ಟ್ರಸ್ಟ್ ಇಂತಹ ಚಟುವಟಿಕೆಗಳ ಮೇಲೆ ನಿಗಾ ಇಡಬೇಕು. ಅದೇನೇ ಇದ್ದರೂ ಯುಪಿ ಸರ್ಕಾರವು ಈ ವಿಷಯದಲ್ಲಿ ಸರಿಯಾದ ಕ್ರಮವನ್ನು ತೆಗೆದುಕೊಂಡಿದೆ.

ಈ ಸಮಸ್ಯೆ ಸಾವಿರಾರು ಜನರ ನಂಬಿಕೆಗೆ ಸಂಬಂಧಿಸಿದೆ. ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ದೇಣಿಗೆ ನೀಡಿದ್ದಾರೆ. ಆದರೆ, ಈ ವಿಷಯದಲ್ಲಿನ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಸುದ್ದಿ ನನ್ನನ್ನು ನಿರಾಸೆಗೊಳಿಸುತ್ತವೆ ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ನಿರ್ಧಾರಗಳನ್ನು ಶ್ಲಾಘಿಸಿದ ಅಪರ್ಣಾ, ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದತಿಯ ಕೇಂದ್ರ ಸರ್ಕಾರದ ನಿರ್ಧಾರ ಶ್ಲಾಘನೀಯ. ಅಲ್ಲದೆ, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಪ್ರಯತ್ನಗಳು ಗಮನಾರ್ಹ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

'ತೈಲ ಬೆಲೆ ಏರಿಕೆ ಬಗ್ಗೆ ಪರಿಶೀಲಿಸಬೇಕು'

ಅಗತ್ಯ ವಸ್ತುಗಳ ಬೆಲೆ ಏರಿಕೆಯ ಕುರಿತು ಕೇಳಿದ ಪ್ರಶ್ನೆಗೆ ಅವರು, ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ಬೆಲೆ ಏರಿಕೆಯಾಗಿದೆ. ಆದರೆ, ಡೀಸೆಲ್, ಪೆಟ್ರೋಲ್ ಮತ್ತು ಅಡುಗೆ ಅನಿಲದ ಬೆಲೆ ಏರಿಕೆ ಬಗ್ಗೆ ಪರಿಶೀಲನೆ ಮಾಡಬೇಕಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:SP ವರಿಷ್ಠ ಮುಲಾಯಂ ಸಿಂಗ್‌ ಯಾದವ್‌ ಸೊಸೆ ಅಪರ್ಣಾ ಯಾದವ್‌ ಬಿಜೆಪಿ ಸೇರ್ಪಡೆ

Last Updated : Jan 19, 2022, 7:39 PM IST

For All Latest Updates

TAGGED:

ABOUT THE AUTHOR

...view details