ಪಶ್ಚಿಮ ಗೋದಾವರಿ (ಆಂಧ್ರ ಪ್ರದೇಶ):ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿ ಮೂವರು ಮೃತಪಟ್ಟಿರುವ ಘಟನೆ ಆಂಧ್ರ ಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ ಗುರುವಾರ ನಡೆದಿದೆ.
ಇಲ್ಲಿನ ತಾಡೆಪಲ್ಲಿಗುಡೆಂ ಮಂಡಲದ ಕಡಿಯಡ್ಡಾದಲ್ಲಿ ಅಣ್ಣಾವರಂ ಎಂಬುವವರಿಗೆ ಸೇರಿದ ಪಟಾಕಿ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ. ಈ ಸ್ಫೋಟದ ವೇಳೆ ಕಾರ್ಖಾನೆಯಲ್ಲಿ 10 ಮಂದಿ ಕಾರ್ಮಿಕರು ಇದ್ದರು ಎನ್ನಲಾಗಿದೆ.
ಸ್ಫೋಟದಿಂದ ಮೂವರು ಸಾವನ್ನಪ್ಪಿ, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಭಾರೀ ಸ್ಫೋಟದಿಂದ ಸ್ಥಳೀಯರು ಭಯಭೀತರಾಗಿದ್ದರು. ಈ ವಿಷಯ ತಿಳಿದು ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಪರಿಹಾರ ಕಾರ್ಯಾಚರಣೆಯಲ್ಲಿ ನಡೆಸಿದ್ದಾರೆ.
ಇನ್ನು, ಇಂದು ಒಂದೇ ದಿನ ದೇಶದಲ್ಲಿ ಸಂಭವಿಸಿದ ಎರಡನೇ ದುರ್ಘಟನೆ ಇದಾಗಿದೆ. ತಮಿಳುನಾಡಿನ ಮಧುರೈನಲ್ಲೂ ಇಂದು ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿ ಐವರು ಮೃತಪಟ್ಟಿರುವ ಘಟನೆ ವರದಿಯಾಗಿದೆ.
ಇದನ್ನೂ ಓದಿ:ಪಟಾಕಿ ಕಾರ್ಖಾನೆಯಲ್ಲಿ ಭಾರಿ ಸ್ಫೋಟ: ಐವರ ದುರ್ಮರಣ, 11 ಮಂದಿಗೆ ಗಂಭೀರ ಗಾಯ