ನವದೆಹಲಿ: ಉಕ್ರೇನ್ನ ಖಾರ್ಕಿವ್ನಲ್ಲಿರುವ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿ ನವೀನ್ ಶೇಖರಪ್ಪ ಪ್ರಾಣ ಕಳೆದುಕೊಂಡಿದ್ದು, ಅವರ ಅಕಾಲಿಕ ನಿಧನಕ್ಕೆ ತೀವ್ರ ಸಂತಾಪ ಸೂಚಿಸುವುದಾಗಿ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್ ತಿಳಿಸಿದರು.
ಉಕ್ರೇನ್ನಲ್ಲಿರುವ ಭಾರತೀಯ ವಿದ್ಯಾರ್ಥಿಗಳನ್ನ ಸುರಕ್ಷಿತವಾಗಿ ಕರೆತಂದಿರುವ ವಿಷಯವಾಗಿ ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ನವೀನ್ ಮೃತದೇಹವನ್ನು ಸುರಕ್ಷಿತವಾಗಿ ಭಾರತಕ್ಕೆ ತರುವ ಎಲ್ಲ ಪ್ರಯತ್ನಗಳು ಮುಂದುವರೆದಿದ್ದು, ಅದಕ್ಕಾಗಿ ಉಕ್ರೇನ್ನಲ್ಲಿರುವ ನಮ್ಮ ರಾಯಭಾರ ಕಚೇರಿ ಕೆಲಸ ಮಾಡ್ತಿದೆ ಎಂದರು.
'ಆಪರೇಷನ್ ಗಂಗಾ' ಮೂಲಕ ಇಲ್ಲಿಯವರೆಗೆ 90 ವಿಮಾನಗಳು ಕಾರ್ಯನಿರ್ವಹಿಸಿದ್ದು, ಇದರಲ್ಲಿ 76 ನಾಗರಿಕ ವಿಮಾನ, 14 ಭಾರತೀಯ ವಾಯುಪಡೆಯ ವಿಮಾನಗಳು ಸೇರಿಕೊಂಡಿವೆ. ರೋಮೆನಿಯಾ, ಪೋಲೆಂಡ್, ಹಂಗೇರಿ ಮತ್ತು ಸ್ಲೋವೇಕಿಯಾದಿಂದ ಭಾರತೀಯ ವಿದ್ಯಾರ್ಥಿಗಳನ್ನ ಸುರಕ್ಷಿತವಾಗಿ ಕರೆತರಲಾಗಿದೆ ಎಂಬ ಮಾಹಿತಿ ಹಂಚಿಕೊಂಡಿರುವ ವಿದೇಶಾಂಗ ಸಚಿವರು, ಕೇಂದ್ರಕ್ಕೆ ಇದೊಂದು ಸವಾಲಿನ ಕೆಲಸವಾಗಿತ್ತು ಎಂದು ಹೇಳಿದ್ದಾರೆ.