ನವದೆಹಲಿ: 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್-19 ಲಸಿಕೆ ನೀಡುವ ಮೂರನೇ ಹಂತದ ಲಸಿಕಾ ಅಭಿಯಾನದ ಆರಂಭಕ್ಕೂ ಮುನ್ನ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರದ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸಿದ್ದಾರೆ. ಲಸಿಕೆ ತಯಾರಿಸುವ ಕಂಪನಿಗಳಿಗಾಗಿ ಕೇಂದ್ರ ಸರ್ಕಾರವು ಈಗಾಗಲೇ ಬೃಹತ್ ಪ್ರಮಾಣದ ಸಾರ್ವಜನಿಕರ ಹಣವನ್ನು ವಿನಿಯೋಗಿಸಿದೆ. ಆದರೆ ಈಗ ಅದೇ ಲಸಿಕೆಯನ್ನು ಜನತೆಗೆ ದುಬಾರಿ ಬೆಲೆಯಲ್ಲಿ ಮಾರಲಾಗುತ್ತಿದೆ ಎಂದು ರಾಹುಲ್ ಆರೋಪಿಸಿದ್ದಾರೆ.
ವಿಶ್ವದ ಬೇರಾವ ದೇಶದಲ್ಲೂ ಲಸಿಕೆ ಇಷ್ಟು ದುಬಾರಿಯಾಗಿಲ್ಲ. ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಗೆಳೆಯರಿಗಾಗಿ ಜನತೆಯನ್ನು ಲೂಟಿ ಮಾಡುತ್ತಿದ್ದಾರೆ ಎಂದು ರಾಹುಲ್ ಹೇಳಿದ್ದಾರೆ.