ನವದೆಹಲಿ:ಕುಟುಂಬ ರಾಜಕಾರಣ ಹಾಗೂ ಕುಟುಂಬ ನಡೆಸುವ ಪಕ್ಷಗಳು ಪ್ರಜಾಪ್ರಭುತ್ವಕ್ಕೆ ದೊಡ್ಡ ಬೆದರಿಕೆಯಾಗಿವೆ. ರಾಷ್ಟ್ರೀಯ ಪಕ್ಷವೊಂದು ಕೂಡಾ ಇದಕ್ಕೆ ಬಲಿಯಾಗಿದೆ ಎಂದು ಪ್ರಧಾನಿ ಮೋದಿ ಪರೋಕ್ಷವಾಗಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮತ್ತು ವಿವಿಧ ರಾಜ್ಯಗಳ ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆ ಆಯೋಜಿಸಿದ್ದ ಸನ್ಮಾನ ಸಮಾರಂಭದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು ತಮ್ಮ ಪಕ್ಷದ ವಿಜಯದ ಏಕೈಕ ಮಂತ್ರವೆಂದರೆ "ಸಬ್ಕಾ ಸಾಥ್, ಸಬ್ಕಾ ವಿಕಾಸ್ ಮತ್ತು ಸಬ್ಕಾ ವಿಶ್ವಾಸ್'' ಎಂದು ಪುನರುಚ್ಚರಿಸಿದರು.