ಘಾಜಿಪುರ :ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಕೈಹಿಡಿದು ಬಿಜೆಪಿ ತಿರಸ್ಕರಿಸಿದ ಬಂಗಾಳಿಯರಿಗೆ ಕೇಂದ್ರದ ಮೂರು ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಗಡಿಗಳಲ್ಲಿ ಪ್ರತಿಭಟನೆಗೆ ಕುಳಿತಿದ್ದ ರೈತ ಮುಖಂಡರು ಕೃತಜ್ಞತೆ ಸಲ್ಲಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರನ್ನು 'ಸರ್ವಾಧಿಕಾರಿ' ಎಂದು ಕರೆದ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ವಕ್ತಾರ ಜಗ್ತಾರ್ ಸಿಂಗ್ ಬಜ್ವಾ ಅವರು, ರೈತ ವಿರೋಧಿ ಪಕ್ಷವನ್ನು ಆಯ್ಕೆಯಿಂದ ಬದಿಗಿಡುವ ಮೂಲಕ ರಾಜ್ಯದ ಜನರು ಅತ್ಯುತ್ತಮ ಕೆಲಸ ಮಾಡಿದ್ದಾರೆ ಎಂದು ಹೇಳಿದರು.