ಕರ್ನಾಟಕ

karnataka

ETV Bharat / bharat

ಸಿಂಘು ಗಡಿಯಲ್ಲಿ ಪ್ರತಿಭಟಿಸುತ್ತಿದ್ದ ರೈತ ಹೃದಯಾಘಾತದಿಂದ ಸಾವು

ಡಿಸೆಂಬರ್ 6 ರಿಂದ ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಹರಿಯಾಣದ ಗುರ್ಮೀತ್ ನಿವಾಸಿ ಮೊಹಾಲಿ ಎಂಬ ರೈತ ಇಂದು ಸಿಂಘು ಗಡಿಯಲ್ಲಿ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ.

ರೈತ ಹೃದಯಾಘಾತದಿಂದ ಸಾವು
ರೈತ ಹೃದಯಾಘಾತದಿಂದ ಸಾವು

By

Published : Dec 15, 2020, 3:56 PM IST

ಸೋನಿಪತ್ (ಹರಿಯಾಣ): ದೆಹಲಿ-ಹರಿಯಾಣ ಗಡಿ ಭಾಗವಾದ ಸಿಂಘು ಗಡಿಯಲ್ಲಿ ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟಿಸುತ್ತಿದ್ದ ಮತ್ತೋರ್ವ ರೈತ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಮೃತ ರೈತನನ್ನು ಗುರ್ಮೀತ್ ನಿವಾಸಿ ಮೊಹಾಲಿ(70) ಎಂದು ಗುರುತಿಸಲಾಗಿದೆ. ಇನ್ನು ಇವರು ಡಿ.6 ರಿಂದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

ಓದಿ:ಸಿಂಘು ಗಡಿಯಲ್ಲಿ ಪ್ರತಿಭಟಿಸುತ್ತಿದ್ದ ರೈತ ಸಾವು

ಇನ್ನು ಮೊಹಾಲಿಗೆ ಹೃದಯಾಘಾತ ಸಂಭವಿಸಿದೆ ಎಂಬ ಮಾಹಿತಿ ಪಡೆದ ಕುಂಡ್ಲಿ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರೈತರ ಆಂದೋಲನವು ಮೂರು ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸುತ್ತಿದೆ. ಇನ್ನು ಈ ಹೋರಾಟದ ಸಂದರ್ಭದಲ್ಲಿ ಸಾವನ್ನಪ್ಪಿದ ರೈತರ ಸಂಖ್ಯೆ 4ಕ್ಕೆ ಏರಿದೆ.

ABOUT THE AUTHOR

...view details