ನವದೆಹಲಿ: ಕೃಷಿ ಕಾನೂನುಗಳ ವಿರುದ್ಧ ರೈತರು ಸುಮಾರು ನೂರು ದಿನಗಳಿಂದ ಹೋರಾಟ ನಡೆಸುತ್ತಿದ್ದು, ಭಾರತೀಯ ಕಿಸಾನ್ ಯೂನಿಯನ್(ಬಿಕೆಯು)ನ ನಾಯಕ ರಾಕೇಶ್ ಟಿಕಾಯತ್ಗೆ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕಮಲಾ ಮಾರ್ಕೆಟ್ ಪೊಲೀಸರ ಮಾಹಿತಿ ಶುಕ್ರವಾರ ರಾತ್ರಿ ವ್ಯಕ್ತಿಯೋರ್ವ ಪೊಲೀಸ್ ಠಾಣೆಗೆ ಕರೆ ಮಾಡಿ, ರೈತ ಮುಖಂಡ ರಾಕೇಶ್ ಟಿಕಾಯತ್ ಅವರನ್ನು ಗುಂಡಿಟ್ಟು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದನು. ಬೆದರಿಕೆ ಕರೆ ಬಂದ ಒಂದು ಗಂಟೆಯಲ್ಲಿ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ, ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ:ಅಸ್ಸಾಂನಲ್ಲಿ ವಿಧಾನಸಭಾ ಚುನಾವಣೆ: 40 ಮಂದಿ ಅಭ್ಯರ್ಥಿಗಳ ಘೋಷಿಸಿದ ಕಾಂಗ್ರೆಸ್
ಟೀ ಮಾರಾಟಗಾರನಾಗಿದ್ದ ಆರೋಪಿ ಮದ್ಯವ್ಯಸನಿಯಾಗಿದ್ದು, ಟಿಕಾಯತ್ ಅವರನ್ನು ಕೊಲ್ಲುವ ಉದ್ದೇಶವಿರಲಿಲ್ಲ ಎಂದು ತಿಳಿದುಬಂದಿದೆ. ಆತನನ್ನ ವಿಚಾರಣೆ ನಡೆಸಿ, ಎಲ್ಲಾ ಸಂಪರ್ಕಗಳನ್ನು ಪರಿಶೀಲನೆ ಮಾಡಲಾಗಿದೆ. ಯಾವುದೇ ಅನುಮಾನಾಸ್ಪದ ವಿಚಾರಗಳು ಕಂಡುಬಂದಿಲ್ಲ. ಕಠಿಣ ಎಚ್ಚರಿಕೆ ನೀಡಿ ಅವನನ್ನು ಬಿಟ್ಟಿದ್ದೇವೆ ಎಂದು ಈಟಿವಿ ಭಾರತ್ಗೆ ಪೊಲೀಸ್ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.
ಇನ್ನು ದೆಹಲಿಯ ಸಿಂಘು, ಟಿಕ್ರಿ, ಘಾಜಿಪುರ ಗಡಿಗಳಲ್ಲಿ ರೈತರು ನೂರು ದಿನಗಳಿಂದ ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಪ್ರತಿಭಟನೆ ಮತ್ತಷ್ಟು ಮುನ್ನೆಲೆಗೆ ಬರುತ್ತಿದೆ.