ಮುಜಾಫರ್‌ನಗರ (ಉತ್ತರಪ್ರದೇಶ) :ರೈತ ಮುಖಂಡ ಮತ್ತು ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ರಾಷ್ಟ್ರೀಯ ವಕ್ತಾರ ರಾಕೇಶ್ ಟಿಕಾಯತ್ ಅಪರಿಚಿತ ವ್ಯಕ್ತಿಗಳಿಂದ ಕೊಲೆ ಬೆದರಿಕೆ ಸ್ವೀಕರಿದ್ದು, ಘಟನೆ ಸಂಬಂಧ ದೂರು ದಾಖಲು ಮಾಡಿದ್ದಾರೆ. ಬೆಳಗ್ಗೆ ದೂರವಾಣಿ ಮೂಲಕ ಅಪರಿಚಿತ ವ್ಯಕ್ತಿ ಕೊಲೆ ಮಾಡುವ ಬೆದರಿಕೆ ಹಾಕಿದ್ದಾನಂತೆ. ಘಟನೆ ಸಂಬಂಧ ತ್ವರಿತ ಕ್ರಮಕೈಗೊಳ್ಳಬೇಕೆಂದು ಟಿಕಾಯತ್ ಒತ್ತಾಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ರೈತ ಚಳವಳಿಯ ನಂತರ ತನಗೆ ಮತ್ತು ತನ್ನ ಕುಟುಂಬ ಸದಸ್ಯರಿಗೆ ಅಪರಿಚಿತ ಸಂಖ್ಯೆಗಳಿಂದ ಬೆದರಿಕೆ ಕರೆಗಳು ಬರುತ್ತಿವೆ. ಕೊಲೆ ಬೆದರಿಕೆಗಳಲ್ಲದೆ ಅವಾಚ್ಯ ಶಬ್ದಗಳಿಂದ ನಿಂದಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.