ನವದೆಹಲಿ: ರಾಷ್ಟ್ರ ರಾಜಧಾನಿಯ ಗಡಿಭಾಗಗಳಲ್ಲಿ ಕಳೆದೊಂದು ವರ್ಷದಿಂದ ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟಿಸುತ್ತಿದ್ದ ಅನ್ನದಾತರು ಇದೀಗ ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ. ಇದೇ ಹೋರಾಟದಲ್ಲಿ ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಮತ್ತು ರಾಜಸ್ಥಾನ ಸೇರಿದಂತೆ ವಿವಿಧ ರಾಜ್ಯಗಳ 700ಕ್ಕೂ ಹೆಚ್ಚು ರೈತರು ಬಲಿಯಾಗಿದ್ದರು.
ಮೂರೂ ಕೃಷಿ ಕಾನೂನುಗಳನ್ನು ಹಿಂಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಮಹತ್ತರ ಘೋಷಣೆ ಹೊರಡಿಸಿದ ಬೆನ್ನಲ್ಲೇ ಘಾಜಿಪುರ, ಸಿಂಘು ಸೇರಿದಂತೆ ಎನ್ಸಿಆರ್ ಗಡಿಭಾಗಳಲ್ಲಿ ರೈತರು ಜಿಲೇಬಿ ಹಂಚಿ, "ಕಿಸಾನ್ ಜಿಂದಾಬಾದ್" ಎಂದು ಘೋಷಣೆ ಕೂಗಿ ಸಂತಸ ವ್ಯಕ್ತಪಡಿಸಿದ್ದಾರೆ.