ಕರ್ನಾಟಕ

karnataka

ETV Bharat / bharat

ಬೇಡಿಕೆಗೆ ಒಪ್ಪಿದ ಕೇಂದ್ರ: ಪ್ರತಿಭಟನೆ ಹಿಂಪಡೆಯುವ ಬಗ್ಗೆ ಇಂದು ರೈತರ ಸಭೆ - ಕೃಷಿ ಕಾಯ್ದೆ ವಿರೋಧಿಸಿ ರೈತರ ಪ್ರತಿಭಟನೆ

ಕೇಂದ್ರ ಸರ್ಕಾರದ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆ ಹಿಂಪಡೆದುಕೊಳ್ಳುವ ಸಾಧ್ಯತೆಯಿದೆ. ರೈತರ ಎಲ್ಲ ಬೇಡಿಕೆ ಅಂಗೀಕಾರ ಮಾಡುವುದಾಗಿ ಕೇಂದ್ರ ಸರ್ಕಾರ ಲಿಖಿತ ರೂಪದಲ್ಲಿ ಒಪ್ಪಿಗೆ ನೀಡಿರುವ ಕಾರಣ ಅನ್ನದಾತರು ಈ ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.

farmers-meeting
ರೈತರ ಸಭೆ

By

Published : Dec 8, 2021, 5:55 AM IST

ನವದೆಹಲಿ:ದೆಹಲಿಯ ಗಡಿಗಳಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಕೈಬಿಡುವಂತೆ ಕೇಂದ್ರ ಸರ್ಕಾರ ಸಲ್ಲಿಸಿದ ಪ್ರಸ್ತಾವದ ಬಗ್ಗೆ ಇಂದು ಮಧ್ಯಾಹ್ನ 2 ಗಂಟೆಗೆ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರತಿಭಟನೆಯ ನೇತೃತ್ವ ವಹಿಸಿರುವ ಸಂಯುಕ್ತ ಕಿಸಾನ್‌ ಮೋರ್ಚಾ ತಿಳಿಸಿದೆ.

ಕೇಂದ್ರ ಸರ್ಕಾರದ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆ ಹಿಂಪಡೆದುಕೊಳ್ಳುವ ಸಾಧ್ಯತೆಯಿದೆ. ರೈತರ ಎಲ್ಲ ಬೇಡಿಕೆ ಅಂಗೀಕಾರ ಮಾಡುವುದಾಗಿ ಕೇಂದ್ರ ಸರ್ಕಾರ ಲಿಖಿತ ರೂಪದಲ್ಲಿ ಒಪ್ಪಿಗೆ ನೀಡಿರುವ ಕಾರಣ ಅನ್ನದಾತರು ಈ ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.

ಕೇಂದ್ರ ಸರ್ಕಾರ ಮೂರು ವಿವಾದಿತ ಕೃಷಿ ಕಾಯ್ದೆ ಜಾರಿಗೊಳಿಸುತ್ತಿದ್ದಂತೆ ಆರಂಭಗೊಂಡಿದ್ದ ರೈತರ ಪ್ರತಿಭಟನೆಯು ಈಗಾಗಲೇ ಒಂದು ವರ್ಷ ಪೂರೈಸಿದೆ. ಚಳಿಗಾಲದ ಅಧಿವೇಶನಕ್ಕೂ ಮುನ್ನ ಕೇಂದ್ರ ಸರ್ಕಾರವು ಮೂರು ಕೃಷಿ ಬಿಲ್​ ಹಿಂಪಡೆದುಕೊಳ್ಳುವುದಾಗಿ ಘೋಷಣೆ ಮಾಡಿತ್ತು. ಆದರೆ, ಕನಿಷ್ಠ ಬೆಂಬಲ ಬೆಲೆ, ರೈತರ ಮೇಲಿನ ಅಪರಾಧ ಪ್ರಕರಣ ಹಿಂಪಡೆದುಕೊಳ್ಳುವವರೆಗೂ ತಾವು ಪ್ರತಿಭಟನೆ ಮುಂದುವರೆಸುವುದಾಗಿ ರೈತರು ಕೇಂದ್ರಕ್ಕೆ ಪತ್ರ ಬರೆದಿದ್ದರು.

ಇದಾದ ಬಳಿಕ ಡಿಸೆಂಬರ್​​ 4ರಂದು ಸಭೆ ನಡೆಸಿದ್ದ ಸಂಯುಕ್ತ ಕಿಸಾನ್​ ಮೋರ್ಚಾ, ಕನಿಷ್ಠ ಬೆಂಬಲ ಬೆಲೆ ವಿಚಾರವಾಗಿ ಡಿಸೆಂಬರ್​​ 7ರಂದು ಕೇಂದ್ರದೊಂದಿಗೆ ಮಾತುಕತೆ ನಡೆಸುವುದಾಗಿ ಘೋಷಣೆ ಮಾಡಿತ್ತು. ಇದಕ್ಕಾಗಿ ಐವರು ಸದಸ್ಯರ ಸಮಿತಿ ಸಹ ರಚನೆ ಮಾಡಿತ್ತು. ಅದರಂತೆ ಮಂಗಳವಾರ ಕೇಂದ್ರ ಹಾಗೂ ರೈತ ಸಮಿತಿ ಮಧ್ಯೆ ಮಾತುಕತೆ ನಡೆದಿದೆ. ರೈತರ ಎಲ್ಲ ಬೇಡಿಕೆ ಅಂಗೀಕಾರಕ್ಕಾಗಿ ತಾವು ಸಿದ್ಧವಿರುವುದಾಗಿ ಕೇಂದ್ರ ತಿಳಿಸಿದೆ.

ಕನಿಷ್ಠ ಬೆಂಬಲ ಬೆಲೆ ವಿಚಾರವಾಗಿ ಸಮಿತಿ ರಚನೆ ಮಾಡುವುದಾಗಿ ತಿಳಿಸಿರುವ ಕೇಂದ್ರ, ರೈತರ ಮೇಲಿನ ಎಲ್ಲ ಪೊಲೀಸ್ ಪ್ರಕರಣ ಕೈಬಿಡುವುದಾಗಿ ತಿಳಿಸಿದೆ ಎನ್ನಲಾಗಿದೆ. ರೈತರ ಎಲ್ಲ ಬೇಡಿಕೆಗಳಿಗೆ ಕೇಂದ್ರ ಸರ್ಕಾರ ಅಸ್ತು ಎಂದಿರುವ ಹಿನ್ನೆಲೆಯಲ್ಲಿ ತಮ್ಮ ಮುಂದಿನ ನಿರ್ಧಾರದ ಬಗ್ಗೆ ರೈತ ಸಂಘಟನೆಯು ಇಂದು ಅಂತಿಮ ನಿರ್ಧಾರ ಪ್ರಕಟಿಸಲಿದೆ.

ಇದನ್ನೂ ಓದಿ:ತಂಗಿ ಮದುವೆಗೆ ಚಿನ್ನ ಖರೀದಿಸಲು ಬ್ಯಾಂಕ್​​​ನಲ್ಲಿ ಸಿಗದ ಸಾಲ.. ಆತ್ಮಹತ್ಯೆಗೆ ಶರಣಾದ ಸಹೋದರ..

ABOUT THE AUTHOR

...view details