ಕರ್ನಾಟಕ

karnataka

ETV Bharat / bharat

ಬೇಡಿಕೆಗಳಲ್ಲಿ ಬದಲಿಲ್ಲ, ಸರ್ಕಾರ ಆಹ್ವಾನಿಸಿದರೆ ಮಾತುಕತೆಗೆ ಸಿದ್ಧ: ರಾಕೇಶ್ ಟಿಕಾಯತ್

ರೈತರು ಮತ್ತು ಕೇಂದ್ರ ಸರಕಾರದ ಮಧ್ಯೆ ಜನವರಿ 22ರ ಬಳಿಕ ಯಾವುದೇ ಮಾತುಕತೆ ನಡೆದಿಲ್ಲ. ಸರ್ಕಾರವು ನಮ್ಮ ಮಾತುಗಳನ್ನು ಆಲಿಸಿ ಬೇಡಿಕೆಗಳನ್ನು ಈಡೇರಿಸಲು ಮುಂದಾಗಬೇಕು. ಈ ಕುರಿತು ಚರ್ಚಿಸಲು ಆಹ್ವಾನಿಸಿದರೆ ರೈತರು ಮಾತನಾಡಲು ಸಿದ್ಧರಿದ್ದಾರೆ. ಆದ್ರೆ ನಮ್ಮ ಬೇಡಿಕೆಗಳಲ್ಲಿ ಯಾವುದೇ ಬದಲಾವಣೆಯಾಗದು ಎಂದು ರೈತ ಮುಖಂಡ ರಾಕೇಶ್ ಟಿಕಾಯತ್​ ತಿಳಿಸಿದ್ದಾರೆ.

ರಾಕೇಶ್ ಟಿಕಾಯತ್
ರಾಕೇಶ್ ಟಿಕಾಯತ್

By

Published : Apr 12, 2021, 8:26 AM IST

ಗಾಜಿಯಾಬಾದ್: ವಿವಾದಾತ್ಮಕ ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು ಕೇಂದ್ರ ಸರ್ಕಾರ ಆಹ್ವಾನಿಸಿದರೆ ಮಾತನಾಡಲು ಸಿದ್ಧರಾಗಿದ್ದಾರೆ ಎಂದು ಭಾರತೀಯ ಕಿಸಾನ್ ಯೂನಿಯನ್(ಬಿಕೆಯು) ಮುಖಂಡ ರಾಕೇಶ್ ಟಿಕಾಯತ್​ ಹೇಳಿದ್ದಾರೆ.

ಸರ್ಕಾರ ಮತ್ತು ರೈತ ಸಂಘಗಳ ನಡುವೆ ಈಗಾಗಲೇ ಹಲವು ಸುತ್ತಿನ ಮಾತುಕತೆಗಳು ನಡೆದಿವೆ. ಆದರೂ ಸಹ ಯಾವುದೇ ಪ್ರಯೋಜನವಾಗಿಲ್ಲ. ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವವರೆಗೂ ರೈತರು ಪ್ರತಿಭಟನಾ ಸ್ಥಳದಿಂದ ಅಲುಗಾಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಆದರೆ ಕೊರೊನಾ ವೈರಸ್ ಭೀತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರತಿಭಟನಾನಿರತ ರೈತರೊಂದಿಗೆ ಮಾತುಕತೆ ಪುನರಾರಂಭಿಸುವಂತೆ ಟಿಕಾಯತ್ ಸರ್ಕಾರಕ್ಕೆ ತಿಳಿಸಿದ್ದಾರೆ.

ಹೊಸದಾಗಿ ಜಾರಿಗೆ ತಂದ ಮೂರು ಕೃಷಿ ಕಾನೂನುಗಳ ವಿರುದ್ಧ ರೈತರು ಕಳೆದ ನವೆಂಬರ್‌ನಿಂದ ದೆಹಲಿಯ ವಿವಿಧ ಪ್ರದೇಶಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ABOUT THE AUTHOR

...view details