ಕರ್ನಾಟಕ

karnataka

ETV Bharat / bharat

WFI ಮುಖ್ಯಸ್ಥನ ವಿರುದ್ಧ ಕುಸ್ತಿಪಟುಗಳ ಪ್ರತಿಭಟನೆಗೆ ರೈತರ ಬೆಂಬಲ - WFI ಮುಖ್ಯಸ್ಥನ ವಿರುದ್ಧ ಲೈಂಗಿಕ ಕಿರುಕುಳದ ಆರೋಪದ

ಕುಸ್ತಿಪಟುಗಳ ಪ್ರತಿಭಟನೆ ಬೆಂಬಲಿಸಿ ರೈತ ಸಂಘಟನೆಗಳು ಬ್ಯಾರಿಕೇಡ್‌ಗಳನ್ನು ಮುರಿದು ಜಂತರ್ ಮಂತರ್​ಗೆ ಪ್ರವೇಶಿಸಲು ಪ್ರಯತ್ನಿಸಿದಾಗ ಗದ್ದಲ ಉಂಟಾಗಿದೆ.

farmers-who-reached-jantar-mantar-from-punjab
WFI ಮುಖ್ಯಸ್ಥನ ವಿರುದ್ಧ ಕುಸ್ತಿಪಟುಗಳ ಪ್ರತಿಭಟನೆಗೆ ರೈತರು ಬೆಂಬಲ

By

Published : May 8, 2023, 6:53 PM IST

ನವದೆಹಲಿ:ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳ ಪ್ರತಿಭಟನೆ ಮುಂದುವರೆದಿದ್ದು, ಇಂದು ವಿವಿಧ ರಾಜ್ಯಗಳಿಂದ ಖಾಪ್ ಪಂಚಾಯತ್‌ಗೆ ಸಂಬಂಧಿಸಿದವರು ಆಗಮಿಸಿ ಕುಸ್ತಿಪಟುಗಳಿಗೆ ಬೆಂಬಲ ಸೂಚಿಸಿದ್ದಾರೆ. ಪ್ರತಿಭಟನೆ ನಡೆಯುತ್ತಿರು ಜಂತರ್ ಮಂತರ್​ಗೆ ಪಂಜಾಬ್‌ನ ಕೆಲವು ರೈತ ಸಂಘಟನೆಗಳು ಬ್ಯಾರಿಕೇಡ್‌ಗಳನ್ನು ಮುರಿದು ಒಳಗೆ ಪ್ರವೇಶಿಸಲು ಪ್ರಯತ್ನಿಸಿದಾಗ ಗದ್ದಲ ಉಂಟಾಗಿದೆ. ಈ ವೇಳೆ ಪೊಲೀಸರು ರೈತರನ್ನು ತಡೆದು ಪರಿಸ್ಥಿತಿ ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಬಗ್ಗೆ ಡೆಪ್ಯುಟಿ ಕಮಿಷನರ್ ಆಫ್ ಪೋಲೀಸ್ ಪ್ರಣವ್ ತಯಾಲ್ ಟ್ವೀಟ್ ಮಾಡಿ, ಕೆಲವು ರೈತರು ಪ್ರತಿಭಟನಾ ಸ್ಥಳಕ್ಕೆ ತೆರಳುವಾಗ ಈ ಘಟನೆ ಸಂಭವಿಸಿದೆ. ರೈತರನ್ನು ಪ್ರತಿಭಟನಾ ಸ್ಥಳಕ್ಕೆ ಕರೆದೊಯ್ಯಲು ಬ್ಯಾರಿಕೇಡ್‌ಗಳನ್ನು ತೆಗೆದುಹಾಕಲಾಗಿದ್ದು, ಸಭೆ ಶಾಂತಿಯುತವಾಗಿ ನಡೆದಿದೆ ಎಂದು ತಿಳಿಸಿದ್ದಾರೆ.

"ಪ್ರತಿಭಟನಾಕಾರರು ಧರಣಿ ಸ್ಥಳಕ್ಕೆ ತಲುಪಿದ್ದಾರೆ ಮತ್ತು ಸಭೆ ಶಾಂತಿಯುತವಾಗಿ ನಡೆದಿದೆ, ಪ್ರತಿಭಟನಾಕಾರರೊಂದಿಗೆ ಯಾವುದೇ ಘರ್ಷಣೆ ಉಂಟಾಗಿಲ್ಲ ಮತ್ತು ಸ್ಥಳದಲ್ಲಿ ಪೊಲೀಸರು ಪ್ರತಿಭಟನಾಕಾರರಿಗೆ ಅನುಕೂಲ ಮಾಡಿಕೊಟ್ಟು ಶಾಂತಿಯುತವಾಗಿ ಸಭೆ ನಡೆಯುವಂತೆ ನೋಡಿಕೊಂಡಿದ್ದಾರೆ. ಯಾರು ನಕಲಿ ಸುದ್ದಿಗಳನ್ನು ನಂಬಬೇಡಿ. ಸುರಕ್ಷತೆ ಖಚಿತಪಡಿಸಿಕೊಳ್ಳಲು ಡಿಎಫ್‌ಎಂಡಿ ಮೂಲಕ ಪ್ರವೇಶವನ್ನು ನಿಯಂತ್ರಿಸಲಾಗುತ್ತಿದೆ. ದಯವಿಟ್ಟು ಶಾಂತಿಯುತವಾಗಿರಿ ಮತ್ತು ಕಾನೂನಿಗೆ ಬದ್ಧರಾಗಿರಿ" ಎಂದು ದೆಹಲಿ ಪೊಲೀಸರ ಅಧಿಕೃತ ಟ್ವಿಟರ್ ಹ್ಯಾಂಡಲ್‌ ಟ್ವೀಟ್ ಮಾಡಿದೆ.

WFI ಮುಖ್ಯಸ್ಥನ ವಿರುದ್ಧ ಲೈಂಗಿಕ ಕಿರುಕುಳದ ಆರೋಪದ ಮೇಲೆ ಕ್ರಮಕ್ಕೆ ಒತ್ತಾಯಿಸಿ ಕುಸ್ತಿಪಟುಗಳು ಏಪ್ರಿಲ್ 23 ರಿಂದ ಜಂತರ್ ಮಂತರ್‌ನಲ್ಲಿ ಧರಣಿ ನಡೆಸುತ್ತಿದ್ದಾರೆ. ಪ್ರತಿಭಟನಾ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಜಮಾಯಿಸಿದ್ದು, ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ಬೆಂಬಲ ಸೂಚಿಸಿದ್ದಾರೆ.

ಇದನ್ನೂ ಓದಿ:ಕುಸ್ತಿ ಫೆಡರೇಷನ್​ ಅಧ್ಯಕ್ಷರ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಎಫ್​ಐಆರ್​ ದಾಖಲಿಸುವಂತೆ ಸುಪ್ರೀಂಗೆ ಮೊರೆ

ಇತ್ತೀಚಿಗೆ ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (ಐಒಎ) ಅಧ್ಯಕ್ಷೆ ಪಿ.ಟಿ ಉಷಾ ಪ್ರತಿಭಟನಾನಿರತ ಕುಸ್ತಿಪಟುಗಳನ್ನು ಭೇಟಿ ಮಾಡಿದ್ದರು. ಈ ಹಿಂದೆ ಪಿ.ಟಿ ಉಷಾ ಅವರ ಹೇಳಿಕೆಯಿಂದ ಕುಸ್ತಿಪಟುಗಳು ಅಸಮಾಧಾನಗೊಂಡಿದ್ದರು. ಕುಸ್ತಿಪಟುಗಳನ್ನು ಭೇಟಿ ಮಾಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸದೇ ಪಿ.ಟಿ ಉಷಾ ಅಲ್ಲಿಂದ ತೆರಳಿದ್ದರು. ಬಳಿಕ ಮಾತನಾಡಿದ್ದ ಬಜರಂಗ್​ ಪೂನಿಯಾ, ಪಿ.ಟಿ ಉಷಾ ನಮ್ಮನ್ನು ಭೇಟಿ ಮಾಡಿ ತಮ್ಮ ಬೆಂಬಲವನ್ನು ಸೂಚಿಸಿದ್ದಾರೆ. ಅವರು ತಾನು ಮೊದಲಾಗಿ ಕ್ರೀಡಾಪಟು ನಂತರ ರಾಜಕಾರಣಿ. ಕುಸ್ತಿಪಟುಗಳಿಗೆ ಖಂಡಿತವಾಗಿಯೂ ನ್ಯಾಯ ಒದಗಿಸುವುದಾಗಿ ಹೇಳಿದ್ದಾರೆ ಎಂದಿದ್ದರು. ಅವರು ಈ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಪಿ.ಟಿ ಉಷಾ ನನ್ನ ಹೇಳಿಕೆಯನ್ನು ತಪ್ಪಾಗಿ ಬಿಂಬಿಸಲಾಗಿದೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದರು.

ಇದಕ್ಕೂ ಮೊದಲು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಪಿ.ಟಿ ಉಷಾ, ''ಲೈಂಗಿಕ ಕಿರುಕುಳ ಆರೋಪ ಸಂಬಂಧ ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಸಮಿತಿಯನ್ನು ಹೊಂದಿದೆ. ಬೀದಿಯಲ್ಲಿ ಪ್ರತಿಭಟಿಸುವ ಬದಲು ಕುಸ್ತಿಪಟುಗಳು ನಮ್ಮ ಬಳಿಗೆ ಬರಬಹುದಿತ್ತು. ಆದರೆ, ಕುಸ್ತಿಪಟುಗಳು ಅಸೋಸಿಯೇಷನ್​​ನನ್ನು ಸಂಪರ್ಕಿಸಿಲ್ಲ. ಇದು ಕುಸ್ತಿಪಟುಗಳಿಗೆ ಮಾತ್ರವಲ್ಲ ಕ್ರೀಡೆಗೂ ಒಳ್ಳೆಯದಲ್ಲ. ಸ್ವಲ್ಪ ಶಿಸ್ತು ಇರಬೇಕು'' ಎಂಬ ಹೇಳಿಕೆ ನೀಡಿದ್ದರು.

ABOUT THE AUTHOR

...view details