ಕರ್ನಾಟಕ

karnataka

ETV Bharat / bharat

ಪಂಜಾಬ್ ಚುನಾವಣಾ ಕಣಕ್ಕೆ ಪ್ರಧಾನಿ ಮೋದಿ: ಪ್ರತಿಭಟನೆಗೆ ಸಜ್ಜಾದ ರೈತ ಸಂಘಟನೆಗಳು

ಕೇಂದ್ರ ಸರ್ಕಾರ ರೈತರಿಗೆ ನೀಡಿದ ಭರವಸೆ ಈಡೇರಿಸಿಲ್ಲ. ಕನಿಷ್ಠ ಬೆಂಬಲ ಬೆಲೆ ಕುರಿತ ನಿರ್ಧಾರಕ್ಕೆ ಸಮಿತಿ ರಚನೆ ಮಾಡಿಲ್ಲ. ರೈತರ ಮೇಲೆ ದಾಖಲಾಗಿರುವ ದೂರುಗಳನ್ನು ಹಿಂಪಡೆದಿಲ್ಲ ಎಂದು ಯುನೈಟೆಡ್ ಕಿಸಾನ್ ಮೋರ್ಚಾ ಆರೋಪಿಸಿದೆ.

Farmers will again oppose PM Modi's visit to Punjab
ಪಂಜಾಬ್ ಚುನಾವಣಾ ಪ್ರಚಾರಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ: ಪ್ರತಿಭಟನೆಗೆ ಸಜ್ಜಾದ ರೈತ ಸಂಘಟನೆಗಳು

By

Published : Feb 13, 2022, 7:50 AM IST

ಬರ್ನಾಲಾ(ಪಂಜಾಬ್):ಪಂಜಾಬ್​ನಲ್ಲಿ ಪ್ರಧಾನಿ ಮೋದಿಗೆ ಎದುರಿಸಿದ ಭದ್ರತಾ ಲೋಪ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿತ್ತು. ಈಗ ಪಂಜಾಬ್​ನಲ್ಲಿ ವಿಧಾನಸಭಾ ಚುನಾವಣೆ ಆರಂಭವಾಗಲಿದೆ. ಎಲ್ಲಾ ಪಕ್ಷಗಳ ನಾಯಕರು ರಾಜ್ಯಕ್ಕೆ ಆಗಮಿಸಿ, ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ.

ಪ್ರಧಾನಿ ಮೋದಿಯೂ ಚುನಾವಣಾ ಪ್ರಚಾರಕ್ಕಾಗಿ ನಾಳೆ ಪಂಜಾಬ್​ಗೆ ಆಗಮಿಸಲಿದ್ದು, ಈ ವೇಳೆ ಪ್ರತಿಭಟನೆ ನಡೆಸುವ ನಿರ್ಧಾರವನ್ನು ಯುನೈಟೆಡ್ ಕಿಸಾನ್ ಮೋರ್ಚಾ ತೆಗೆದುಕೊಂಡಿದೆ. ಈ ಕುರಿತು ಬರ್ನಾಲಾದ ತಾರ್ಕಶಿಲ ಭವನದಲ್ಲಿ ರೈತ ಮುಖಂಡರು ಚರ್ಚೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಬರ್ನಾಲಾದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಹಾದುಹೋಗುವ ರಸ್ತೆಯ ಬದಿಯಲ್ಲಿ ಕಪ್ಪು ಬಾವುಟ ಪ್ರದರ್ಶಿಸುತ್ತೇವೆ ಎಂದು ರೈತ ಮುಖಂಡರೊಬ್ಬರು ತಿಳಿಸಿದರು.

ಕೇಂದ್ರ ಸರ್ಕಾರ ರೈತರಿಗೆ ನೀಡಿದ ಭರವಸೆ ಈಡೇರಿಸಿಲ್ಲ. ಕನಿಷ್ಠ ಬೆಂಬಲ ಬೆಲೆ ಕುರಿತ ನಿರ್ಧಾರಕ್ಕೆ ಸಮಿತಿಯನ್ನು ಇನ್ನೂ ರಚನೆ ಮಾಡಿಲ್ಲ. ರೈತರ ಮೇಲೆ ದಾಖಲಾಗಿರುವ ದೂರುಗಳನ್ನು ಹಿಂಪಡೆದಿಲ್ಲ ಎಂದು ಯುನೈಟೆಡ್ ಕಿಸಾನ್ ಮೋರ್ಚಾ ಆರೋಪಿಸಿದೆ.

ಇದನ್ನೂ ಓದಿ:ಹರಿಯಾಣ ಸಿಎಂ ಖಟ್ಟರ್ ಅವರಿದ್ದ ಹೆಲಿಕಾಪ್ಟರ್ ತುರ್ತು ಲ್ಯಾಂಡಿಂಗ್

ಯುನೈಟೆಡ್ ಕಿಸಾನ್ ಮೋರ್ಚಾ ಸೇರಿದಂತೆ ಸುಮಾರು 20 ರೈತ ಸಂಘಟನೆಗಳು ಪ್ರತಿಭಟನೆ ನಡೆಸಲು ಮುಂದಾಗಿವೆ ಎಂದು ತಿಳಿದುಬಂದಿದೆ. ಪ್ರಧಾನಿ ಮೋದಿ ಫೆಬ್ರವರಿ 14ರಿಂದ 16ರವರೆಗೆ ಚುನಾವಣಾ ಪ್ರಚಾರ ನಡೆಸಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ABOUT THE AUTHOR

...view details