ಕಣ್ಣೂರು(ಕೇರಳ): 38 ವರ್ಷದ ವ್ಯಕ್ತಿಯೋರ್ವ ಏಳು ತಿಂಗಳ ಮಗುವನ್ನು ಕೊಲೆಗೈದು, ಕಟ್ಟಿಕೊಂಡ ಹೆಂಡತಿಯ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ, ಕೊನೆಗೂ ತಾನು ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೇರಳದ ಕಣ್ಣೂರಿನಲ್ಲಿ ನಿನ್ನೆ ಬೆಳಗ್ಗೆ ಈ ಘಟನೆ ನಡೆದಿದೆ.
ಗಂಡನಿಂದ ತೀವ್ರ ಸ್ವರೂಪದ ಹಲ್ಲೆಗೊಳಗಾಗಿ ಗಂಭೀರವಾಗಿ ಗಾಯಗೊಂಡಿರುವ ಪತ್ನಿ ಅಂಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯಸ್ಥಿತಿ ಗಂಭೀರವಾಗಿದೆ.
ಯಾವ ಕಾರಣಕ್ಕಾಗಿ ಈ ಘಟನೆ ನಡೆಯಿತು ಎಂಬ ಮಾಹಿತಿ ಸದ್ಯಕ್ಕೆ ಲಭ್ಯವಿಲ್ಲ. ಪತಿ ಸತೀಶ್ ಅಡುಗೆ ಮನೆ ಚಾಕು ಬಳಸಿ ಮಗುವನ್ನು ಗಾಯಗೊಳಿಸಿದ್ದು, ಸ್ಥಳದಲ್ಲೇ ಸಾವನ್ನಪ್ಪಿದೆ. ಇದಾದ ಬಳಿಕ ಹೆಂಡತಿ ಮೇಲೂ ಹಲ್ಲೆ ಮಾಡಿದ್ದಾನೆ. ಇದರ ಬೆನ್ನಲ್ಲೇ ತಾನು ಆತ್ಮಹತ್ಯೆಗೆ ಶರಣಾಗಿದ್ದಾನೆ.