ಖಮ್ಮಂ (ತೆಲಂಗಾಣ):ವಿಧಿಯಾಟ ಬಲ್ಲವರಾರು ಎಂಬುದಕ್ಕೆ ಮತ್ತೊಂದು ನಿದರ್ಶನ ಇಲ್ಲಿದೆ. ಮಗಳನ್ನು ಶಾಲೆಗೆ ಬಿಟ್ಟು ಮನೆಗೆ ತೆರಳುತ್ತಿದ್ದ ಶಿಕ್ಷಕನೋರ್ವ ಅಸ್ತೆ ಅಪಘಾತದಲ್ಲಿ ದಾರುಣವಾಗಿ ಸಾವನ್ನಪ್ಪಿದ ಘಟನೆ ತೆಲಂಗಾಣದ ಖಮ್ಮಂನಲ್ಲಿ ನಡೆದಿದೆ. ಅಪಘಾತದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಇಲ್ಲಿನ ತಲ್ಲಾಡ ಮಂಡಲದ ಶಾಲೆಯೊಂದರಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಎಲ್. ರಾಜಶೇಖರ್ ಸಾವನ್ನಪ್ಪಿದವರು. ಖಮ್ಮಂ ನಿವಾಸಿಯಾಗಿರುವ ರಾಜಶೇಖರ್ ಅವರು, ಸ್ಥಳೀಯ ಶಾಲೆಯೊಂದರಲ್ಲಿ 10ನೇ ತರಗತಿ ಓದುತ್ತಿರುವ ತಮ್ಮ ಮಗಳನ್ನು ಬೈಕ್ ಮೇಲೆ ಕರೆದುಕೊಂಡು ಬಂದು ಶಾಲೆಗೆ ಬಿಟ್ಟಿದ್ದಾರೆ.
ಮಗಳನ್ನು ಶಾಲೆಗೆ ಬಿಟ್ಟು ರಸ್ತೆ ದಾಟುತ್ತಿದ್ದ ತಂದೆ.. ರಸ್ತೆ ಅಪಘಾತಕ್ಕೆ ಬಲಿ ಬಳಿಕ ಶಾಲೆಯ ಮುಂಭಾಗದ ರಸ್ತೆಯಿಂದ ಸ್ವಲ್ಪ ದೂರದಲ್ಲಿ ಯೂ ಟರ್ನ್ ತೆಗೆದುಕೊಳ್ಳುವಾಗ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದಿದೆ. ಇದರಿಂದ ರಾಜಶೇಖರ್ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಳಿಕ ಅವರನ್ನು ಹೈದರಾಬಾದ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ, ದುರದೃಷ್ಟವಶಾತ್ ದಾರಿ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ. ಅಪಘಾತದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.
ಮೃತ ರಾಜಶೇಖರ್ ಅವರ ಪತ್ನಿಯೂ ಶಿಕ್ಷಕಿಯಾಗಿದ್ದು, ಬೋನಕಲ್ ಪ್ರೌಢಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ದಂಪತಿಗೆ ಒಬ್ಬ ಮಗಳು ಮತ್ತು ಮಗ ಇದ್ದಾರೆ.
ಓದಿ:ಮನೆ ಬಾಡಿಗೆ ಕೇಳುವ ಸೋಗಿನಲ್ಲಿ ಬಂದು ದರೋಡೆ.. ಖದೀಮರ ಬಂಧನ