ಚಿತ್ತೂರು(ಆಂಧ್ರ ಪ್ರದೇಶ):ಇಲ್ಲಿನ ಜಿಲ್ಲಾ ಕೇಂದ್ರದಲ್ಲಿರುವ ಪೇಪರ್ ಪ್ಲೇಟ್ ತಯಾರಿಕಾ ಘಟಕದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಕಳೆದ ಮಧ್ಯರಾತ್ರಿ ಸಂಭವಿಸಿದ ದುರ್ಘಟನೆಯಲ್ಲಿ ಮೂವರು ಸಜೀವ ದಹನವಾಗಿದ್ದಾರೆ. ಮೃತರನ್ನು ಕಂಪನಿ ಮಾಲೀಕ ಭಾಸ್ಕರ್, ಅವರ ಮಗ ಡಿಲ್ಲಿ ಬಾಬು ಮತ್ತು ಬಾಲಾಜಿ ಎಂದು ಗುರುತಿಸಲಾಗಿದೆ.
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಶಾರ್ಟ್ ಸರ್ಕ್ಯೂಟ್‌ನಿಂದ ಅನಾಹುತ ನಡೆದಿರುವುದಾಗಿ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.