ಜಲಗಾಂವ್(ಮಹಾರಾಷ್ಟ್ರ): ಆರು ವರ್ಷದ ಮಗನ ಕತ್ತು ಹಿಸುಕಿ ಕೊಲೆ ಮಾಡಿರುವ ತಂದೆಯೋರ್ವ ತಂದನಂತರ ಆತನೂ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಮಹಾರಾಷ್ಟ್ರದ ಜಲಗಾಂವ್ನಲ್ಲಿ ನಡೆದಿದೆ. ಘಟನೆ ಹಿಂದಿನ ಕಾರಣ ಇಲ್ಲಿಯವರೆಗೂ ಸ್ಪಷ್ಟವಾಗಿಲ್ಲ.
ಜಲಗಾಂವ್ನ ಫೈಜ್ಪುರ ನಗರದ ಬಸ್ ನಿಲ್ದಾಣದ ಹಿಂದುಗಡೆ ಪತ್ನಿ ಹಾಗೂ ಮಗುವಿನೊಂದಿಗೆ ವಾಸವಾಗಿದ್ದ ನೀಲೇಶ್ ಘನಶ್ಯಾಮ್ ತನ್ನ ಆರು ವರ್ಷದ ಮಗನ ಕತ್ತು ಹಿಸುಕಿ ಕೊಲೆ ಮಾಡಿದ್ದು, ತದನಂತರ ಆತನು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಪತ್ನಿ ದಿನಸಿ ಸಾಮಗ್ರಿ ತರಲು ಹೊರಗಡೆ ಹೋಗಿದ್ದಳು. ಈ ವೇಳೆ ಮನೆಯಲ್ಲಿ ಈ ಕೃತ್ಯವೆಸಗಿದ್ದಾನೆ. ಮಾರುಕಟ್ಟೆಯಿಂದ ಮನೆಗೆ ಬಂದಿರುವ ಪತ್ನಿ ಬಾಗಿಲು ತೆರೆಯಲು ಮುಂದಾಗಿದ್ದಾಳೆ. ಆದರೆ ಅದು ಒಳಗಡೆಯಿಂದ ಲಾಕ್ ಆಗಿರುವುದು ಗೊತ್ತಾಗಿದೆ. ಅಕ್ಕಪಕ್ಕದವರ ಸಹಾಯದಿಂದ ಬಾಗಿಲು ತೆರೆಯಲಾಗಿದ್ದು, ಈ ವೇಳೆ ಇಬ್ಬರ ಮೃತದೇಹ ಪತ್ತೆಯಾಗಿವೆ. ಇದನ್ನ ನೋಡಿರುವ ಹೆಂಡತಿ ಶಾಕ್ಗೊಳಗಾಗಿದ್ದಾಳೆ.
ಇದನ್ನೂ ಓದಿ:16 ತಿಂಗಳ ಹಸುಳೆ ಮೇಲೆ ಲೈಂಗಿಕ ಕಿರುಕುಳ, ಕೊಲೆ: ತಂದೆ-ತಾಯಿ ಬಂಧನ
ಇಬ್ಬರ ಮೃತದೇಹಗಳನ್ನು ಈಗಾಗಲೇ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ, ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಫೈಜ್ಪುರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.