ಪುಣೆ(ಮಹಾರಾಷ್ಟ್ರ): ಕ್ಯಾಂಪಸ್ ಪ್ಲೇಸ್‌ಮೆಂಟ್ ಸಿಗುವುದಿಲ್ಲ ಎಂದು ಅರಿತ 21 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಪಶ್ಚಿಮ ಪುಣೆಯ ಐಟಿ ಕೇಂದ್ರವಾದ ಹಿಂಜಾವಾಡಿ ಬಳಿಯ ಸುಸ್ಗಾಂವ್ ಪ್ರದೇಶದ ನಿವಾಸಿ ಎಂಟು ಅಂತಸ್ತಿನ ಕಟ್ಟಡದ ಮೇಲಿಂದ ಜಿಗಿದು ತಮ್ಮ ಪ್ರಾಣ ಬಿಟ್ಟಿದ್ದಾರೆ.
ಉದ್ಯೋಗ ಸಿಗುವುದಿಲ್ಲ ಎಂದು 8 ಅಂತಸ್ತಿನ ಕಟ್ಟಡದಿಂದ ಜಿಗಿದು ಪ್ರಾಣಬಿಟ್ಟ ಇಂಜಿನಿಯರಿಂಗ್ ವಿದ್ಯಾರ್ಥಿ! - ಉದ್ಯೋಗ ಸಿಗುವುದಿಲ್ಲ ಎಂದು ಪ್ರಾಣ ಬಿಟ್ಟ ಇಂಜಿನಿಯರಿಂಗ್ ವಿದ್ಯಾರ್ಥಿ
ಕೋರ್ಸ್ ಮುಗಿದ ಬಳಿಕ ಕ್ಯಾಂಪಸ್ ಸಂದರ್ಶನದಲ್ಲಿ ಉದ್ಯೋಗ ದೊರೆಯುವುದಿಲ್ಲ ಎಂಬ ಕಾರಣಕ್ಕೆಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.
ಉದ್ಯೋಗ ಸಿಗುವುದಿಲ್ಲ
ಓದಿ:ಮೈಸೂರು: ಅನಾರೋಗ್ಯದ ಕಾರಣಕ್ಕೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ
ಮೃತರು ಪ್ರತಿಷ್ಠಿತ ಇಂಜಿನಿಯರಿಂಗ್ ಸಂಸ್ಥೆಯಲ್ಲಿ ಕಂಪ್ಯೂಟರ್ ಸೈನ್ಸ್‌ನ ನಾಲ್ಕನೇ ವರ್ಷದ ವಿದ್ಯಾರ್ಥಿಯಾಗಿದ್ದರು. ವಿದ್ಯಾರ್ಥಿ ಸಾಯುವ ಮುನ್ನ ಡೆತ್ ನೋಟ್ ಬರೆದಿದ್ದಾರೆ. ಆತನಿಗೆ ಕೋರ್ಸ್ ಮುಗಿದ ನಂತರ ಉದ್ಯೋಗ ಸಿಗುವುದಿಲ್ಲ ಎಂಬ ಭಯ ಕಾಡುತ್ತಿತ್ತು. ಹೀಗಾಗಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಹಿಂಜಾವಾಡಿ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.