ಚಂಡೀಗಢ(ಪಂಜಾಬ್):ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭದ್ರತಾ ವೈಫಲ್ಯ ಉಂಟಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಪಂಜಾಬ್ ಸರ್ಕಾರ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ.
ಬುಧವಾರ ಪಂಜಾಬ್ನ ಫಿರೋಜ್‌ಪುರಕ್ಕೆ ಪಿಎಂ ಮೋದಿಯವರ ಭೇಟಿಯ ಸಂದರ್ಭದಲ್ಲಿ ಆದ ಭದ್ರತಾ ಲೋಪದೋಷಗಳನ್ನು ತನಿಖೆ ಮಾಡಲು ರಚಿಸಲಾದ ಸಮಿತಿಯಲ್ಲಿ ನಿವೃತ್ತ ನ್ಯಾಯಮೂರ್ತಿ ಮೆಹ್ತಾಬ್ ಸಿಂಗ್ ಗಿಲ್, ಗೃಹ ವ್ಯವಹಾರಗಳ ಪ್ರಧಾನ ಕಾರ್ಯದರ್ಶಿ ಮತ್ತು ನ್ಯಾಯಮೂರ್ತಿಯಾದ ಅನುರಾಗ್ ವರ್ಮಾ ಇರುತ್ತಾರೆ ಎಂದು ತಿಳಿದುಬಂದಿದೆ.