ನವದೆಹಲಿ:'ಆಪರೇಷನ್ ಗಂಗಾ'ದಡಿ ರೊಮೇನಿಯಾದ ಬುಕಾರೆಸ್ಟ್ನಿಂದ ಭಾರತೀಯರನ್ನು ಏರ್ಲಿಫ್ಟ್ ಮಾಡಲಾಗುತ್ತಿದೆ. ಇಂದು 249 ವಿದ್ಯಾರ್ಥಿಗಳು ಸೇರಿದಂತೆ ಭಾರತೀಯರನ್ನು ಸುರಕ್ಷಿತವಾಗಿ ಕರೆತರಲಾಗಿದೆ.
ಉಕ್ರೇನ್ನಿಂದ ರೊಮೇನಿಯಾ ಗಡಿಗೆ ಬಂದ ಬಳಿಕ ನಮ್ಮನ್ನು ಭಾರತೀಯ ರಾಯಭಾರಿ ಕಚೇರಿ ಅಧಿಕಾರಿಗಳು ಸಾಕಷ್ಟು ಸಹಾಯ ಮಾಡಿ, ಸುರಕ್ಷಿತವಾಗಿ ಭಾರತಕ್ಕೆ ಕರೆತಂದಿದ್ದಾರೆ. ಉಕ್ರೇನ್ನಲ್ಲಿ ಸಿಲುಕಿರುವ ಎಲ್ಲಾ ಭಾರತೀಯರನ್ನು ಸರ್ಕಾರ ಕರೆತರುವ ಭರವಸೆ ಇದೆ. ಇನ್ನೂ ಹಲವಾರು ವಿದ್ಯಾರ್ಥಿಗಳು ಅಲ್ಲಿಯೇ ಸಿಲುಕಿದ್ದಾರೆ ಎಂದು ಭಾರತಕ್ಕೆ ಬಂದಿಳಿದ ವಿದ್ಯಾರ್ಥಿಯೊಬ್ಬರು ತಿಳಿಸಿದರು.