ನವದೆಹಲಿ :ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕಾನೂನು ಖಾತ್ರಿಪಡಿಸುವವರೆಗೆ ಹೋರಾಟ ಮುಂದುವರಿಯುತ್ತದೆ ಎಂದು ಭಾರತೀಯ ಕಿಸಾನ್ ಒಕ್ಕೂಟದ (ಬಿಕೆಯು) ನಾಯಕ ರಾಕೇಶ್ ಟಿಕಾಯತ್ ಶನಿವಾರ ಹೇಳಿದ್ದಾರೆ.
ಕೃಷಿ ಮಸೂದೆ ವಿರೋಧಿ ಹೋರಾಟದಲ್ಲಿ 700ಕ್ಕೂ ಹೆಚ್ಚು ಕುಟುಂಬಗಳು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿವೆ. ಕಳೆದ ವರ್ಷದ ಈ ದಿನಗಳನ್ನು ರೈತರು ಎಂದಿಗೂ ಮರೆಯುವುದಿಲ್ಲ ಎಂದು ಟಿಕಾಯತ್ ಟ್ವೀಟ್ ಮಾಡಿದ್ದಾರೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
'ಎಂಎಸ್‌ಪಿ' ರೈತರ ಬೆನ್ನೆಲುಬು. ಹಾಗಾಗಿ, ರೈತರ ಈ ಕಾನೂನನ್ನು ಬಯಸುತ್ತಾರೆ. ಕಳೆದ ವರ್ಷ ನವೆಂಬರ್ 19ರಂದು ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ಅಗತ್ಯವಾದ ಮಸೂದೆಗಳನ್ನು ಜಾರಿಗೆ ತರಲಿದೆ ಎಂದು ಘೋಷಿಸಿದರು. ಲೋಕಸಭೆ ಮತ್ತು ರಾಜ್ಯಸಭೆ ಎರಡೂ ಚಳಿಗಾಲದ ಅಧಿವೇಶನದ ಮೊದಲ ದಿನ ಕೃಷಿ ಕಾನೂನುಗಳ ರದ್ಧತಿ ಮಸೂದೆಯನ್ನು ಅಂಗೀಕರಿಸಲಾಗಿತ್ತು.
ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ತಮ್ಮ ಒಪ್ಪಿಗೆ ಸೂಚಿಸಿದ್ದರು. ಜತೆಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಮಸೂದೆಗೆ ಜಾರಿಗೆ ತರಲು ಸರ್ಕಾರ ಸಮಿತಿ ರಚಿಸಲಿದೆ ಎಂದು ಪ್ರಧಾನಿ ಹೇಳಿದ್ದರು.
ಇದನ್ನೂ ಓದಿ:ದೇಶದಲ್ಲೇ 'ಭಾರತೀಯ ಜನತಾ ಪಾರ್ಟಿ' ಅತ್ಯಂತ ಶ್ರೀಮಂತ ಪಕ್ಷ.. ಕಾಂಗ್ರೆಸ್ ಆದಾಯ ಎಷ್ಟು?