ಮುಂಬೈ: ಶಿವಸೇನಾ ನಾಯಕ, ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಪುತ್ರ ಆದಿತ್ಯ ಠಾಕ್ರೆ ವಿರುದ್ಧ ಪ್ರಕರಣ ದಾಖಲಿಸುವಂತೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗವು ಪೊಲೀಸ್ ಆಯುಕ್ತರಿಗೆ ಸೂಚಿಸಿದೆ.
3 ದಿನಗಳಲ್ಲಿ ಪ್ರಕರಣ ದಾಖಲಿಸುವಂತೆ ಸೂಚನೆ ನೀಡಲಾಗಿದೆ. 'Save Aarey' ಆಂದೋಲನದ ವಿಷಯದಲ್ಲಿ ಆದಿತ್ಯ ಠಾಕ್ರೆ ವಿರುದ್ಧ ದೂರು ದಾಖಲಿಸಲು ಸೂಚಿಸಲಾಗಿದೆ. ಆಂದೋಲನವು ಬಾಲಾಪರಾಧಿ ಕಾಯ್ದೆಯ ಸೆಕ್ಷನ್ 75 ಅನ್ನು ಉಲ್ಲಂಘಿಸಿದೆ ಎಂದು ಆರೋಪಿಸಲಾಗಿದೆ.
ರಾಜ್ಯದ ಮಾಜಿ ಪ್ರವಾಸೋದ್ಯಮ ಸಚಿವ ಹಾಗೂ ಶಿವಸೇನೆ ನಾಯಕ ಆದಿತ್ಯ ಠಾಕ್ರೆ ವಿರುದ್ಧ ಮೂರು ದಿನಗಳಲ್ಲಿ ಕ್ರಮ ಕೈಗೊಳ್ಳುವಂತೆ ಮಕ್ಕಳ ಹಕ್ಕು ಆಯೋಗ ಮುಂಬೈ ಪೊಲೀಸ್ ಆಯುಕ್ತರಿಗೆ ಪತ್ರ ಕಳುಹಿಸಿದೆ. ಹೀಗಾಗಿ ಕೇಂದ್ರ ಸರ್ಕಾರ ಮತ್ತು ಶಿವಸೇನೆ ನಡುವಿನ ಸಂಘರ್ಷ ಮತ್ತೆ ತಾರಕಕ್ಕೇರುವ ಸಾಧ್ಯತೆ ಇದೆ. ಶಿವಸೇನಾ ನಾಯಕ ಆದಿತ್ಯ ಠಾಕ್ರೆ ಭಾನುವಾರವಷ್ಟೇ ಆರೆ ಕಾರ್ ಶೆಡ್ ವಿರುದ್ಧ ಆಂದೋಲನ ನಡೆಸಿದ್ದರು.
ಇದನ್ನೂ ಓದಿ:ಮನೆಗೆಲಸ ಮಾಡುವ ಸೋಗಿನಲ್ಲಿ ಮನೆಗಳ್ಳತನ: ಲೇಡಿ ಬಾಂಬೆ ಗ್ಯಾಂಗ್ ಅರೆಸ್ಟ್