ನವದೆಹಲಿ:ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ನವದೆಹಲಿಯ ಸುಷ್ಮಾ ಸ್ವರಾಜ್ ಭವನದಲ್ಲಿ ನಡೆಯಲಿರುವ 52 ನೇ ಜಿಎಸ್‌ಟಿ ಕೌನ್ಸಿಲ್ ಸಭೆಯ ಅಧ್ಯಕ್ಷತೆ ವಹಿಸಿಕೊಂಡಿದ್ದಾರೆ. ಕೇಂದ್ರ ಹಣಕಾಸು ಸಚಿವಾಲಯದ ಅಧಿಕೃತ ಎಕ್ಸ್ ಖಾತೆಯಲ್ಲಿ ಈ ಸಂಬಂಧ ಪೋಸ್ಟ್ವೊಂದನ್ನು ಹಾಕಲಾಗಿದೆ.
"ಕೇಂದ್ರ ಹಣಕಾಸು ಸಚಿವ ಶ್ರೀಮತಿ ಅವರು ಇಂದು ನವದೆಹಲಿಯ ಸುಷ್ಮಾ ಸ್ವರಾಜ್ ಭವನದಲ್ಲಿ 52 ನೇ ಜಿಎಸ್‌ಟಿ ಕೌನ್ಸಿಲ್ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಸಭೆಯಲ್ಲಿ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಶ್ರೀ ಎಂಪಿ ಚೌಧರಿ, ರಾಜ್ಯಗಳ ಹಣಕಾಸು ಮಂತ್ರಿಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಅಧಿಕಾರಿಗಳು ಮತ್ತು ಕೇಂದ್ರ ಸರ್ಕಾರ ಮತ್ತು ರಾಜ್ಯಗಳ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ" ಎಂದು ಟ್ವೀಟ್ ಮಾಡಿ ಮಾಹಿತಿ ನೀಡಲಾಗಿದೆ.
ಇಂದಿನ ಜಿಎಸ್‌ಟಿ ಸಭೆಯಲ್ಲಿ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಎಂಪಿ ಚೌಧರಿ, ಎಂಪಿ ಪೂನಿಯಾ, ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಹಣಕಾಸು ಸಚಿವರು ಹಾಗೂ ಕೇಂದ್ರ ಸರ್ಕಾರ ಮತ್ತು ರಾಜ್ಯಗಳ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ. ತೆರಿಗೆ ದರಗಳು, ಆರ್ಥಿಕ ನೀತಿ ಮತ್ತು ಆಡಳಿತಾತ್ಮಕ ಸಮಸ್ಯೆಗಳು ಸೇರಿದಂತೆ ಜಿಎಸ್‌ಟಿ ಆಡಳಿತಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸಲು ಜಿಎಸ್‌ಟಿ ಕೌನ್ಸಿಲ್ ನಿಯತಕಾಲಿಕವಾಗಿ ಸಭೆ ನಡೆಸುತ್ತದೆ.
ಈ ಬಾರಿಯ 52 ನೇ ಸಭೆಯು ಭಾರತೀಯ ತೆರಿಗೆ ವ್ಯವಸ್ಥೆಯ ಮೇಲೆ ಪರಿಣಾಮ ಬೀರುವ ನಿರ್ಣಾಯಕ ಸಮಸ್ಯೆಗಳನ್ನು ಚರ್ಚಿಸಲು ಮತ್ತು ಅದಕ್ಕೆ ಸಂಬಂಧಿಸಿದಂತೆ ಪರಿಹಾರಗಳನ್ನು ಕಂಡುಕೊಳ್ಳುವ ಉದ್ದೇಶವನ್ನು ಹೊಂದಿದೆ. ಜಿಎಸ್‌ಟಿ ಕೌನ್ಸಿಲ್ ಭಾರತದ ತೆರಿಗೆ ರಚನೆಯನ್ನು ರೂಪಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಇದು ರಾಷ್ಟ್ರದ ಆರ್ಥಿಕ ಗುರಿಗಳೊಂದಿಗೆ ಹೊಂದಿಕೆಯಾಗುತ್ತದೆ ಮತ್ತು ನಾಗರಿಕರು ಮತ್ತು ವ್ಯವಹಾರಗಳ ಮೇಲಿನ ತೆರಿಗೆ ಹೊರೆಯನ್ನು ಸುಲಭಗೊಳಿಸಲಿದೆ.
ಬೆಳಗ್ಗೆ 10 ಗಂಟೆಗೆ ಸಭೆ ಆರಂಭವಾಗಿದ್ದು ಮತ್ತು ಅದರ ಫಲಿತಾಂಶಗಳು ದೇಶದ ಆರ್ಥಿಕತೆಯ ಮೇಲೆ ಮಹತ್ವದ ಪರಿಣಾಮ ಬೀರುವ ನಿರೀಕ್ಷೆ ಇಡಲಾಗಿದೆ. ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸಲು GST ವ್ಯವಸ್ಥೆಯನ್ನು ಪರಿಷ್ಕರಿಸಲು ಸರ್ಕಾರದ ಕೈಗೊಂಡಿರುವ ಪ್ರಯತ್ನಗಳ ಭಾಗವಾಗಿದೆ. 52 ನೇ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ತೆಗೆದುಕೊಳ್ಳುವ ನಿರ್ಧಾರಗಳನ್ನು ಮತ್ತು ಶಿಫಾರಸುಗಳನ್ನು ವ್ಯಾಪಾರ ವರ್ಗ, ನೀತಿ ನಿರೂಪಕರು ಮತ್ತು ಸಾರ್ವಜನಿಕರು ಸೇರಿದಂತೆ ವಿವಿಧ ಮಧ್ಯಸ್ಥಗಾರರು ಸೂಕ್ಷ್ಮವಾಗಿ ಗಮನಿಸಲಿದ್ದಾರೆ. ಏಕೆಂದರೆ ಇಂದಿನ ಸಭೆಯ ಫಲಿತಾಂಶ ದೇಶದಲ್ಲಿನ ತೆರಿಗೆ, ವ್ಯಾಪಾರ ಮತ್ತು ಒಟ್ಟಾರೆ ಆರ್ಥಿಕತೆಯ ಮೇಲೆ ಪ್ರಭಾವ ಬೀರಲಿದೆ.
ಇದನ್ನೂ ಓದಿ:2023-24ರ ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿ ಅಂದಾಜು ಬೆಳವಣಿಗೆ ಶೇ.6.3: ವಿಶ್ವಬ್ಯಾಂಕ್