ಮೀರತ್(ಉತ್ತರ ಪ್ರದೇಶ):ದೇಶದಲ್ಲಿ ಕೊರೊನಾ ಸೋಂಕಿನಿಂದ ಅನೇಕ ಕುಟುಂಬಗಳು ಬೀದಿಗೆ ಬಿದ್ದಿದ್ದು, ಇದರ ಮಧ್ಯೆ ಉತ್ತರ ಪ್ರದೇಶದ ಮೀರತ್ನಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ.
ಇಡೀ ಕುಟುಂಬಕ್ಕೆ ವಿಷ ನೀಡಿರುವ ವ್ಯಕ್ತಿಯೋರ್ವ ತಂದನಂತರ ಅಲ್ಲಿಂದ ಪರಾರಿಯಾಗಿದ್ದಾನೆ. ಉತ್ತರ ಪ್ರದೇಶದ ಪಶ್ಚಿಮ ಮೀರತ್ನಲ್ಲಿ ಈ ಘಟನೆ ನಡೆದಿದೆ. ಹೆಂಡತಿ ಹಾಗೂ ಮೂವರು ಮಕ್ಕಳಿಗೆ ವಿಷ ನೀಡಿರುವ ಭೂಪ ಅಲ್ಲಿಂದ ಪರಾರಿಯಾಗಿದ್ದಾನೆ. ಘಟನೆಯಿಂದ ಹೆಂಡತಿ ಹಾಗೂ ಓರ್ವ ಮಗಳು ಸಾವನ್ನಪ್ಪಿದ್ದು, ಇಬ್ಬರು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಆರೋಪಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.