ಕರ್ನಾಟಕ

karnataka

ETV Bharat / bharat

ಸಾಕ್ಷಿ ಮಲಿಕ್, ವಿನೇಶ್ ಫೋಗಟ್, ಬಜರಂಗ್ ಪೂನಿಯಾ ವಿರುದ್ಧ ಎಫ್‌ಐಆರ್‌ಗೆ ಅರ್ಜಿ: ವರದಿ ಕೇಳಿದ ನ್ಯಾಯಾಲಯ - ಭಾರತೀಯ ಒಲಿಂಪಿಕ್ ಅಸೋಸಿಯೇಷನ್‌

ಜಂತರ್ ಮಂತರ್​ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳ ವಿರುದ್ಧ ಎಫ್​ಐಆರ್ ದಾಖಲಿಸುವಂತೆ ಪಟಿಯಾಲ ಹೌಸ್ ಕೋರ್ಟ್​ನಲ್ಲಿ ದೂರು ದಾಖಲಾಗಿದೆ. ಗುರುವಾರ ಈ ಕುರಿತು ವಿಚಾರಣೆ ನಡೆದಿದ್ದು, ನ್ಯಾಯಾಲಯವು ಜೂನ್ 9 ರೊಳಗೆ ಕ್ರಮ ಕೈಗೊಂಡಿರುವ ವರದಿಯನ್ನು ಸಲ್ಲಿಸುವಂತೆ ದೆಹಲಿ ಪೊಲೀಸರಿಗೆ ಸೂಚಿಸಿದೆ.

ಸಾಕ್ಷಿ ಮಲಿಕ್, ವಿನೇಶ್ ಫೋಗಟ್, ಬಜರಂಗ್ ಪೂನಿಯಾ
ಸಾಕ್ಷಿ ಮಲಿಕ್, ವಿನೇಶ್ ಫೋಗಟ್, ಬಜರಂಗ್ ಪೂನಿಯಾ

By

Published : May 25, 2023, 5:04 PM IST

ನವದೆಹಲಿ : ದೆಹಲಿಯ ಜಂತರ್ ಮಂತರ್​ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳ ವಿರುದ್ಧ ಪಟಿಯಾಲ ಹೌಸ್ ಕೋರ್ಟ್​ನಲ್ಲಿ ದೂರು ದಾಖಲಾಗಿದೆ. ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರಕರಣದಲ್ಲಿ ಸಿಂಗ್ ವಿರುದ್ಧ ಎಫ್‌ಐಆರ್ ಕೂಡ ದಾಖಲಾಗಿದೆ. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಸುಳ್ಳು ಆರೋಪ ಮಾಡಿರುವುದಾಗಿ ಹೇಳಲಾಗಿದೆ.

ಗುರುವಾರ ನ್ಯಾಯಾಲಯದಲ್ಲಿ ಈ ಅರ್ಜಿಯ ವಿಚಾರಣೆ ಕೂಡಾ ನಡೆಯಿತು. ನ್ಯಾಯಾಲಯವು ಜೂನ್ 9 ರೊಳಗೆ ತೆಗೆದುಕೊಂಡ ಕ್ರಮಗಳ ವರದಿಯನ್ನು ಸಲ್ಲಿಸುವಂತೆ ದೆಹಲಿ ಪೊಲೀಸರಿಗೆ ಸೂಚಿಸಿದೆ. ಈಗ ಈ ಪ್ರಕರಣದ ಮುಂದಿನ ವಿಚಾರಣೆ ಜೂನ್ 9 ರಂದು ನಡೆಯಲಿದೆ.

ಇಬ್ಬರು ಮಹಿಳೆಯರು ಮತ್ತು ಒಬ್ಬ ಪುರುಷ ಕುಸ್ತಿಪಟು ವಿರುದ್ಧ ದಾಖಲಾಗಿರುವ ದೂರಿನ ವಿಚಾರಣೆಯನ್ನು ಗುರುವಾರ ಪಟಿಯಾಲ ಹೌಸ್ ಕೋರ್ಟ್ ನಡೆಸಲಿದೆ. ಬಾಮ್ ಬಾಮ್ ಮಹಾರಾಜ್ ನೌಹತಿಯಾ ಎಂಬುವವರು ದೂರು ದಾಖಲಿಸಿದ್ದಾರೆ. ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರತಿಭಟನಾ ನಿರತ ಕುಸ್ತಿಪಟುಗಳು ಅಸಂಸದೀಯ ಭಾಷೆ ಬಳಸಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ. ಆರೋಪಿಗಳು ಸಿಂಗ್ ಅವರ ಚಾರಿತ್ರ್ಯವಧೆ ಮಾಡಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ. ಬುಧವಾರ ಬಾಮ್ ಬಾಮ್ ಮಹಾರಾಜ್ ಪರ ವಕೀಲರು ಪಟಿಯಾಲ ಹೌಸ್ ನ್ಯಾಯಾಲಯದಲ್ಲಿ ಕುಸ್ತಿಪಟುಗಳ ವಿರುದ್ಧ ಪ್ರಕರಣ ದಾಖಲಿಸುವಂತೆ ಮನವಿ ಸಲ್ಲಿಸಿದ್ದಾರೆ.

ದೈಹಿಕ ಶಕ್ತಿ ಮತ್ತು ಆರ್ಥಿಕ ಸ್ಥಿರತೆ ಹೊಂದಿದ್ದಾರೆ:ದೂರುದಾರರ ಪರ ವಕೀಲ ಎ ಪಿ ಸಿಂಗ್ ಅವರು ವಾದ ಮಂಡಿಸಿ, ಆರೋಪಿಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟ ಕುಸ್ತಿಪಟುಗಳು. ಅವರು ದೈಹಿಕ ಶಕ್ತಿ ಮತ್ತು ಆರ್ಥಿಕ ಸ್ಥಿರತೆಯನ್ನು ಹೊಂದಿದ್ದಾರೆ. ಸಿಂಗ್ ಎಂಬ 66 ವರ್ಷದ ವ್ಯಕ್ತಿಯಿಂದ ಅವರಿಗೆ ತೊಂದರೆಯಾಗಬಹುದೆಂದು ನಂಬುವುದು ಕಷ್ಟ. ಇದಲ್ಲದೇ, ಯಾವುದೇ ಕುಸ್ತಿಪಟುಗಳು ಔಪಚಾರಿಕ ಪ್ರತಿಭಟನೆ ಅಥವಾ ಲಿಖಿತ ಅಥವಾ ಮೌಖಿಕ ಪ್ರಥಮ ಮಾಹಿತಿ ವರದಿಯನ್ನು (ಎಫ್‌ಐಆರ್) ಸಲ್ಲಿಸದಿರುವುದನ್ನು ಮನವಿ ಎತ್ತಿ ತೋರಿಸುತ್ತದೆ ಎಂದಿದ್ದಾರೆ.

ಆದ್ದರಿಂದ, ಭಾರತದ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿದ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸುವುದು ಅಗತ್ಯವಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ನ್ಯಾಯಾಲಯದ ವ್ಯವಸ್ಥೆಯ ಮೇಲೆ ಅನಗತ್ಯ ಒತ್ತಡ: ಕುಸ್ತಿಪಟುಗಳು ಪೊಲೀಸ್ ಠಾಣೆ, ಮಹಿಳಾ ಸಹಾಯವಾಣಿ, ರಾಜ್ಯ ಮಹಿಳಾ ಆಯೋಗ, ಮಹಿಳಾ ಕಲ್ಯಾಣ ಸಚಿವಾಲಯ ಮತ್ತು ದೆಹಲಿ ಮತ್ತು ಇತರ ರಾಜ್ಯಗಳಲ್ಲಿ ಕಚೇರಿಗಳನ್ನು ಹೊಂದಿರುವ ಭಾರತೀಯ ಒಲಿಂಪಿಕ್ ಅಸೋಸಿಯೇಷನ್‌ನಂತಹ ಸಂಬಂಧಿತ ಅಧಿಕಾರಿಗಳನ್ನು ಸಂಪರ್ಕಿಸಿಲ್ಲ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ಇದಲ್ಲದೇ, ದೆಹಲಿಯ ಜಂತರ್ ಮಂತರ್‌ನಲ್ಲಿ ಕುಸ್ತಿಪಟುಗಳು ಆಯೋಜಿಸಿದ್ದ ಪ್ರತಿಭಟನೆಯು ಅಪೇಕ್ಷಿತ ಫಲಿತಾಂಶವನ್ನು ಸಾಧಿಸುವ ಪ್ರಯತ್ನದಲ್ಲಿ ಪೊಲೀಸರು ಮತ್ತು ನ್ಯಾಯಾಲಯದ ವ್ಯವಸ್ಥೆಯ ಮೇಲೆ ಅನಗತ್ಯ ಒತ್ತಡವನ್ನು ಹೇರಿದೆ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.

ಇದನ್ನೂ ಓದಿ:ಡಬ್ಲ್ಯುಎಫ್‌ಐ ಅಧ್ಯಕ್ಷರ ವಿರುದ್ಧ ದಾಖಲಾಗದ ಎಫ್‌ಐಆರ್: ಜಂತರ್ ಮಂತರ್‌ನಲ್ಲಿ ಕುಸ್ತಿಪಟುಗಳ ಪ್ರತಿಭಟನೆ

ABOUT THE AUTHOR

...view details