ಕರ್ನಾಲ್( ಹರಿಯಾಣ):ಇಲ್ಲಿನ ಕೈಮಲಾ ಗ್ರಾಮದಲ್ಲಿಭಾನುವಾರ ಕಿಸಾನ್ ಮಹಾಪಂಚಾಯತ್‌ನಲ್ಲಿ ನಡೆದ ಗಲಾಟೆ, ವಿಧ್ವಂಸಕ ಕೃತ್ಯಗಳಿಗೆ ಸಂಬಂಧಿಸಿದಂತೆ ಭಾರತೀಯ ರೈತ ಒಕ್ಕೂಟದ 71 ಜನರ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ಕಿಸಾನ್ ಮಹಾಪಂಚಾಯತ್ ಕಾರ್ಯಕ್ರಮವು ಕೈಮ್ಲಾದಲ್ಲಿ ಭಾನುವಾರ ಉತ್ತಮವಾಗಿ ನಡೆಯುತ್ತಿತ್ತು. ಕಾರ್ಯಕ್ರಮದ ಕೊನೆಯಲ್ಲಿ ಕೆಲವರು ಕೋಲುಗಳಿಂದ ಕಾರ್ಯಕ್ರಮಕ್ಕೆ ಬಂದು ಗಲಾಟೆ ನಡೆಸಿದ್ದಾರೆ. ಸರ್ಕಾರಿ ಆಸ್ತಿಯನ್ನು ಧ್ವಂಸ ಮಾಡಲು ಮತ್ತು ಕಾರ್ಯಕ್ರಮದಲ್ಲಿದ್ದವರ ಮೇಲೆ ಹಲ್ಲೆ ಮಾಡಲು ಪ್ರಾರಂಭಿಸಿದರು. ಹೀಗಾಗಿ ಭಕ್ಯು ಅಧ್ಯಕ್ಷ ಗುರ್ನಮ್ ಸಿಂಗ್ ಚಾಡುನಿ ಸೇರಿದಂತೆ 71 ಜನರ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಗಂಗಾರಂ ಪೂನಿಯಾ ತಿಳಿಸಿದ್ದಾರೆ.
ಓದಿ:ವಿಡಿಯೋ: ಹರಿಯಾಣದಲ್ಲಿ ತೀವ್ರಗೊಂಡ ರೈತರ ಹೋರಾಟ, ಗ್ರಾಮಸ್ಥರು-ರೈತರ ಮುಖಾಮುಖಿ