ಕರ್ನಾಟಕ

karnataka

ETV Bharat / bharat

ಮತ್ತೊಂದು ದುರಂತ... ತಮಿಳುನಾಡಿನ ಪಟಾಕಿ ಅಂಗಡಿಯಲ್ಲಿ ಅಗ್ನಿ ಅವಘಡ: 7 ಮಂದಿ ದಾರುಣ ಸಾವು - fire accident in cracker shop in ariyalur district

fire accident in cracker shop: ತಮಿಳುನಾಡಿನ ಅರಿಯಲೂರು ಜಿಲ್ಲೆಯ ಪಟಾಕಿ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ದುರ್ಘಟನೆಯಲ್ಲಿ 7 ಮಂದಿ ಮೃತಪಟ್ಟಿದ್ದಾರೆ.

fire accident in cracker shop
ತಮಿಳುನಾಡಿನ ಪಟಾಕಿ ಅಂಗಡಿಯಲ್ಲಿ ಅಗ್ನಿ ಅವಘಡ, 7 ಮಂದಿ ಸಾವು

By ETV Bharat Karnataka Team

Published : Oct 9, 2023, 1:55 PM IST

Updated : Oct 9, 2023, 2:04 PM IST

ಅರಿಯಲೂರು (ತಮಿಳುನಾಡು):ಕರ್ನಾಟಕದ ಅತ್ತಿಬೆಲೆಯಲ್ಲಿ ನಡೆದ ದುರ್ಘಟನೆ ಮಾಸುವ ಮುನ್ನವೇ ತಮಿಳುನಾಡಿನಲ್ಲಿ ಅಂತಹುದೇ ಘಟನೆಯೊಂದು ವರದಿಯಾಗಿದೆ.

ಅರಿಯಲೂರು ಜಿಲ್ಲೆಯ ಪಟಾಕಿ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ 7 ಮಂದಿ ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ. ರಾಜೇಂದ್ರನ್​ ಎಂಬುವರು. ವೀರಕಲೂರು ಗ್ರಾಮದಲ್ಲಿ ಯಾಜ್ ಕ್ರ್ಯಾಕರ್ಸ್ ಎಂಬ ಅಂಗಡಿಯನ್ನು ನಡೆಸುತ್ತಿದ್ದು, ಪಟಾಕಿಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದಾರೆ. ದೀಪಾವಳಿ ಸಮೀಪಿಸುತ್ತಿದ್ದಂತೆ ಸ್ಥಳೀಯ ಜನರೊಂದಿಗೆ 35ಕ್ಕೂ ಹೆಚ್ಚು ಮಂದಿ ಹಾಗೂ ಶಿವಕಾಶಿಯ ಹತ್ತಕ್ಕೂ ಹೆಚ್ಚು ಮಂದಿ ಪಟಾಕಿ ತಯಾರಿಕೆಯಲ್ಲಿ ತೊಡಗಿದ್ದಾರೆ.

ಬೆಳಗ್ಗೆ 9:30ರ ಸುಮಾರಿಗೆ ಪಟಾಕಿ ತಯಾರಿಸುತ್ತಿದ್ದಾಗ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಈ ವೇಳೆ ಪಟಾಕಿಗಳಿಗೆ ಬೆಂಕಿ ವ್ಯಾಪಿಸಿ ಭಾರಿ ಶಬ್ಧದೊಂದಿಗೆ ಸ್ಫೋಟಗೊಂಡಿದೆ. ಪಟಾಕಿ ತಯಾರಿಕೆಯಲ್ಲಿ ನಿರತರಾಗಿದ್ದ ಜನರು ಬೆಂಕಿಗೆ ಆಹುತಿಯಾಗಿದ್ದಾರೆ.

ಈ ದುರಂತದ ಸುದ್ದಿ ತಿಳಿಯುತ್ತಿದ್ದಂತೆ ಅರಿಯಲೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಿಂದ ಮೂರು ಅಗ್ನಿಶಾಮಕ ದಳಗಳು ಬೆಂಕಿ ನಂದಿಸಲು ಸ್ಥಳಕ್ಕೆ ಧಾವಿಸಿವೆ. ಮೂರು ಗಂಟೆಗಳ ಸತತ ಕಾರ್ಯಾಚರಣೆ ಬಳಿಕ ಬೆಂಕಿಯನ್ನು ನಂದಿಸುವಲ್ಲಿ ಅಗ್ನಿ ಶಾಮಕ ಸಿಬ್ಬಂದಿ ಯಶಸ್ವಿಯಾಗಿದೆ. ಈ ದುರ್ಘಟನೆಯಲ್ಲಿ ಓರ್ವ ಮಹಿಳೆ ಸೇರಿದಂತೆ 7 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ 6ಕ್ಕೂ ಹೆಚ್ಚು ಜನರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಣಹಾನಿ ಹೆಚ್ಚಾಗುವ ಸಾಧ್ಯತೆಯಿದೆ. ಅಪಘಾತ ಸಂಭವಿಸಿರುವುದರ ಕಾರಣದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:ಅತ್ತಿಬೆಲೆ ಪಟಾಕಿ ದುರಂತ : ಠಾಣೆಗೆ ಭೇಟಿ ನೀಡಿದ ಸಿಐಡಿ ಐಜಿ ಪ್ರವೀಣ್ ಮಧುಕರ್ ಪವಾರ್

ಬೆಂಗಳೂರು ಸಮೀಪದ ಅತ್ತಿಬೆಲೆಯ ಪಟಾಕಿ ಗೋದಾಮಿನಲ್ಲಿ ನಡೆದ ಅಗ್ನಿ ಅವಘಡ ಪ್ರಕರಣದಲ್ಲಿ ಒಟ್ಟು 14 ಮಂದಿ ಸಾವನ್ನಪ್ಪಿದ್ದು, 7 ಮಂದಿ ಗಂಭೀರ ಗಾಯಗೊಂಡಿದ್ದರು. ಘಟನೆ ನಡೆದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿತ್ತಾದರೂ, ಅದಾಗಲೇ ಗೋದಾಮಿನಲ್ಲಿದ್ದ ಹಲವರು ಪ್ರಾಣ ಕಳೆದುಕೊಂಡಿದ್ದರು.

ಅಗ್ನಿ ದುರಂತದಲ್ಲಿ ಮೃತಪಟ್ಟವರಿಗೆ ಕರ್ನಾಟಕ ರಾಜ್ಯ ಸರ್ಕಾರ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿತ್ತು. ಅಷ್ಟೇ ಅಲ್ಲ ಗಾಯಾಳುಗಳ ಆಸ್ಪತ್ರೆ ವೆಚ್ಚವನ್ನು ನೋಡಿಕೊಳ್ಳಲಾಗುವುದು ಎಂದು ಡಿಸಿಎಂ ಶಿವಕುಮಾರ್ ಘೋಷಣೆ ಮಾಡಿದ್ದಾರೆ. ಇನ್ನು ಪಟಾಕಿ ಗೋದಾಮಿನಲ್ಲಿ ಸಂಭವಿಸಿರುವ ದುರಂತದ ಬಗ್ಗೆ ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಆದೇಶಿಸಿದ್ದು, ಇಂದಿನಿಂದಲೇ ತನಿಖೆ ಆರಂಭವಾಗಿದೆ. ಇಲಾಖಾಧಿಕಾರಿಗಳು ನೀಡಿರುವ ನಿರಪೇಕ್ಷಣಾ ಪತ್ರದ ಕುರಿತು ಸಿಐಡಿ ಅಧಿಕಾರಿಗಳು ತನಿಖೆ ನಡೆಸಲಿದ್ದಾರೆ. ಗೋದಾಮಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ತಮಿಳುನಾಡಿನ ಇತರ ಕಾರ್ಮಿಕ‌ ವಿದ್ಯಾರ್ಥಿಗಳನ್ನೂ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಲಿದ್ದಾರೆ.

Last Updated : Oct 9, 2023, 2:04 PM IST

ABOUT THE AUTHOR

...view details