ಕೋಲ್ಕತ್ತಾ (ಪಶ್ಚಿಮ ಬಂಗಾಳ): ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದ ಜೋರಬಗನ್ ಬಸ್ತಿಯಲ್ಲಿ ಶುಕ್ರವಾರ ತಡರಾತ್ರಿ ಬೆಂಕಿ ಕಾಣಿಸಿಕೊಂಡಿದೆ.
ಜೋರಬಗನ್ ಬಸ್ತಿ ಪ್ರದೆಶದಲ್ಲಿ ನಿನ್ನೆ ತಡರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿ ತೀವ್ರತೆ ಎಷ್ಟು ದೊಡ್ಡದಾಗಿತ್ತೆಂದರೆ, ಅತಿ ದೂರದ ಪ್ರದೇಶಗಳಿಗೂ ಈ ಅಗ್ನಿ ಜ್ವಾಲೆ ಕಾಣಿಸುತ್ತಿತ್ತು. ಮಾಹಿತಿ ಸಿಕ್ಕ ಕೂಡಲೇ ಅಗ್ನಿಶಾಮಕ ವಾಹನಗಳು, ಪೊಲೀಸರು ಸ್ಥಳಕ್ಕೆ ತಲುಪಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.