ಅಹಮದಾಬಾದ್(ಗುಜರಾತ್):ಇಲ್ಲಿನ ಮೆಮ್ನಗರದ ರಸ್ತೆಯೊಂದರಲ್ಲಿ ಬಸ್ವೊಂದು ಹೊತ್ತಿ ಉರಿದಿರುವ ಘಟನೆ ನಡೆದಿದೆ. ಚಾಲಕ ಈ ಸಂದರ್ಭದಲ್ಲಿ ಸಮಯ ಪ್ರಜ್ಞೆ ಮೆರೆದಿದ್ದು ಎಲ್ಲ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
25 ಪ್ರಯಾಣಿಕರ ಪ್ರಾಣ ಉಳಿಸಿದ ಚಾಲಕ: ನಡುರಸ್ತೆಯಲ್ಲೇ ಧಗಧಗಿಸಿದ ಬಸ್! - ಈಟಿವಿ ಭಾರತ ಕರ್ನಾಟಕ
ಬಸ್ ಚಾಲಕನ ಸಮಯಪ್ರಜ್ಞೆಯಿಂದ 25 ಪ್ರಯಾಣಿಕರ ಪ್ರಾಣ ಉಳಿದಿರುವ ಘಟನೆ ಗುಜರಾತ್ನಲ್ಲಿ ನಡೆದಿದೆ.
Fire in BRTS
ಅಹಮದಾಬಾದ್ನ ಮೆಮ್ನಗರದ ಬಸ್ ನಿಲ್ದಾಣದಲ್ಲಿ ನಿಂತಿದ್ದ ಬಸ್‌ನಲ್ಲಿ ಪ್ರಯಾಣಿಕರು ಕುಳಿತುಕೊಂಡಿದ್ದರು. ಈ ಸಂದರ್ಭದಲ್ಲಿ ಬಸ್‌ನಲ್ಲಿ ದಿಢೀರ್ ಬೆಂಕಿ ಕಾಣಿಕೊಂಡಿತು. ತಕ್ಷಣವೇ ಚಾಲಕ ಎಲ್ಲರನ್ನೂ ಕೆಳಗಿಳಿಸಿದ್ದಾನೆ. ಘಟನಾ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.