ಕರ್ನಾಟಕ

karnataka

ETV Bharat / bharat

ದೆಹಲಿ ಹೋಟೆಲ್​​ನಲ್ಲಿ ಅಗ್ನಿ ಅವಘಡ: ಇಬ್ಬರು ಸಾವು - ಓಯೋ ಕೃಷ್ಣ ಹೋಟೆಲ್​

ದೆಹಲಿಯ ದ್ವಾರಕಾ ಪ್ರದೇಶದಲ್ಲಿರುವ ಹೋಟೆಲ್​ವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

Fire breaks out in Delhi hotel
ದೆಹಲಿ ಹೋಟೆಲ್​​ನಲ್ಲಿ ಅಗ್ನಿ ಅವಘಡ

By

Published : Aug 15, 2021, 10:46 AM IST

ನವದೆಹಲಿ:ರಾಷ್ಟ್ರ ರಾಜಧಾನಿ ದೆಹಲಿಯ ದ್ವಾರಕಾ ಪ್ರದೇಶದಲ್ಲಿರುವ ಹೋಟೆಲ್​ವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದ್ವಾರಕಾದ ಓಯೋ ಕೃಷ್ಣ ಹೋಟೆಲ್​ನಲ್ಲಿ ಇಂದು ಬೆಳಗ್ಗೆ 7.30 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಹೋಟೆಲ್ ಸಿಬ್ಬಂದಿ ನೀಡಿದ ಮಾಹಿತಿ ಮೇರೆಗೆ ಎಂಟು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಬೆಂಕಿ ನಂದಿಸುತ್ತಿದ್ದಾರೆ. ಹೋಟೆಲ್​ ಕಟ್ಟಡದ ಒಳಗಡೆ ಇನ್ನೂ ಕೆಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲೂ ತೊಡಗಿದ್ದಾರೆ.

ಇದನ್ನೂ ಓದಿ: ಹೈಟಿಯಲ್ಲಿ ಪ್ರಬಲ ಭೂಕಂಪ: 304 ಮಂದಿ ಸಾವು, ತುರ್ತು ಪರಿಸ್ಥಿತಿ ಘೋಷಣೆ

ಅಪಘಾತಕ್ಕೆ ಕಾರಣ ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

ABOUT THE AUTHOR

...view details