ಮಹಾರಾಷ್ಟ್ರ:ಪಿಂಪ್ರಿ-ಚಿಂಚ್‌ವಾಡ್‌ನ ತಥಾವಾಡೆ ಪ್ರದೇಶದಲ್ಲಿ ಗ್ಯಾಸ್ ಸಿಲಿಂಡರ್‌ಗಳಲ್ಲಿ ಸ್ಫೋಟಗೊಂಡ ಪರಿಣಾಮ ಭಾರಿ ಬೆಂಕಿ ಕಾಣಿಸಿಕೊಂಡಿದೆ. 6 ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿ ಬೀಡುಬಿಟ್ಟಿವೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಪ್ರಸ್ತುತ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪಿಂಪ್ರಿ - ಚಿಂಚ್ವಾಡ್ ಅಗ್ನಿಶಾಮಕ ಇಲಾಖೆ ಮಾಹಿತಿ ನೀಡಿದೆ.
ಪಿಂಪ್ರಿ ಚಿಂಚ್‌ವಾಡ್ ನಗರದ ತಥಾವಾಡೆ ಪ್ರದೇಶದಲ್ಲಿ ಭಾನುವಾರ ರಾತ್ರಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಅನೇಕ ಎಲ್‌ಪಿಜಿ ಸಿಲಿಂಡರ್‌ಗಳು ಸ್ಫೋಟಗೊಂಡಿದ್ದು, ಸ್ಥಳೀಯ ಜನರಲ್ಲಿ ಭೀತಿಯನ್ನು ಉಂಟುಮಾಡಿದೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ. ಟ್ಯಾಂಕರ್‌ನಿಂದ ಸಿಲಿಂಡರ್‌ಗಳಿಗೆ ಅಕ್ರಮವಾಗಿ ಎಲ್‌ಪಿಜಿ ತುಂಬುತ್ತಿರುವ ಶಂಕೆ ಇದೆ. ಸ್ಫೋಟದ ನಂತರ, ಹತ್ತಿರದ ಕಾಲೇಜಿಗೆ ಸೇರಿದ ಒಂದೆರಡು ಬಸ್‌ಗಳು ಸಹ ಬೆಂಕಿಗೆ ಆಹುತಿಯಾಗಿವೆ ಎಂದು ಪೊಲೀಸರು ಮತ್ತು ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.
ಎಲ್‌ಪಿಜಿ ಸಿಲಿಂಡರ್ಗಳ ಸ್ಫೋಟ ಬಗ್ಗೆ ಅಧಿಕಾರಿಗಳು ಹೇಳಿದ್ದೇನು?:''ರಾತ್ರಿ 10:30 ರ ಸುಮಾರಿಗೆ ಘಟನೆ ಸಂಭವಿಸಿದ್ದು, ಪ್ರಾಥಮಿಕ ಮಾಹಿತಿ ಪ್ರಕಾರ, ನಾಲ್ಕೈದು ಎಲ್‌ಪಿಜಿ ಸಿಲಿಂಡರ್‌ಗಳು ಸ್ಫೋಟಗೊಂಡಿವೆ. ಅಗ್ನಿಶಾಮಕ ಇಲಾಖೆಯಿಂದ ನೀರಿನ ಟ್ಯಾಂಕರ್‌ಗಳನ್ನು ತಕ್ಷಣವೇ ಸ್ಥಳಕ್ಕೆ ರವಾನಿಸಲಾಯಿತು. ಸಿಬ್ಬಂದಿ ಬೆಂಕಿಯನ್ನು ಯಶಸ್ವಿಯಾಗಿ ನಿಯಂತ್ರಣಕ್ಕೆ ತಂದರು. ದೊಡ್ಡ ಪ್ರಮಾಣದ ಸ್ಫೋಟದ ಶಬ್ಧದಿಂದ ಸ್ಥಳೀಯರಲ್ಲಿ ಭಯ ಮೂಡಿದೆ ಎಂದು ಪಿಂಪ್ರಿ ಚಿಂಚ್ವಾಡ್ ಅಗ್ನಿಶಾಮಕ ಇಲಾಖೆಯ ಅಧಿಕಾರಿಯೊಬ್ಬರು ವಿವರಿಸಿದ್ದಾರೆ.