ನವದೆಹಲಿ:ದೆಹಲಿಯ ನರೇಲಾ ಕೈಗಾರಿಕಾ ಪ್ರದೇಶದಲ್ಲಿನ ಪಾದರಕ್ಷೆ ಕಾರ್ಖಾನೆಯಲ್ಲಿ ಮಂಗಳವಾರ ಬೆಂಕಿ ಕಾಣಿಸಿಕೊಂಡಿದ್ದು, ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ.
ದೆಹಲಿ ಅಗ್ನಿಶಾಮಕ ಅಧಿಕಾರಿಗಳ ಪ್ರಕಾರ, ಈವರೆಗೆ ಮೂವರನ್ನು ರಕ್ಷಿಸಲಾಗಿದ್ದು, ಇನ್ನೂ ಕೆಲವರು ಅವಘಡದಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಕಟ್ಟಡದೊಳಗೆ ಸಿಲುಕಿರುವ ಜನರನ್ನು ಸ್ಥಳಾಂತರಿಸಲು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.