ಮಹೋಬಾ: ಎರಡು ಲಾರಿಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಹೊತ್ತಿ ಉರಿದಿದ್ದು, ಚಾಲಕರಿಬ್ಬರು ಸಜೀವ ದಹನವಾಗಿದ್ದಾರೆ. ಮಹೋಬಾ ಜಿಲ್ಲೆಯ ಕಬ್ರೈ ಪೊಲೀಸ್ ಠಾಣೆ ವ್ಯಾಪ್ತಿಯ ಕಾನ್ಪುರ್ ಸಾಗರ್ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಈ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಮತ್ತೊಬ್ಬ ಯುವಕನಿಗೆ ಕೂಡ ಸುಟ್ಟಗಾಯಗಳಾಗಿದ್ದು, ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಬಗ್ಗೆ ಮಾಹಿತಿ ತಿಳಿದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಈ ಬಳಿಕ ಮೃತರ ದೇಹವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಕಲ್ಲು ಮಾರುಕಟ್ಟೆಯಿಂದ ಸರಕುಗಳನ್ನು ಲೋಡ್ ಮಾಡಿ ತೆರಳುತ್ತದ್ದ ಲಾರಿ, ಟ್ರಕ್ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಚಾಲಕರಿಗೆ ಲಾರಿಯಿಂದ ಹೊರಬರಲು ಸಾಧ್ಯವಾಗದೆ ಸಿಲುಕಿಕೊಂಡಿದ್ದಾರೆ. ಆದರೆ ದುರಾದೃಷ್ಟವೆಂಬಂತೆ ಎರಡೂ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡು ಸುಟ್ಟು ಕರಕಲಾಗಿವೆ.